ಮಹಾರಾಷ್ಟ್ರ: ಕುಷ್ಠರೋಗಿಗಳಿಗೆ ಆಧಾರ್ ಜೋಡಣೆ ಕಡ್ಡಾಯವಲ್ಲ

Update: 2018-03-22 15:15 GMT

ಮುಂಬೈ, ಮಾ.22: ಮಹಾರಾಷ್ಟ್ರದಲ್ಲಿ ಕುಷ್ಠರೋಗಿಗಳಿಗೆ ಸರಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯವಲ್ಲ ಎಂದು ಮಹಾರಾಷ್ಟ್ರ ಸರಕಾರ ತಿಳಿಸಿದೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಪ್ರಶಾಂತ್ ಠಾಕೂರ್ ಎತ್ತಿದ ಪ್ರಶ್ನೆಗೆ ಉತ್ತರಿಸಿದ ಸಾಮಾಜಿಕ ನ್ಯಾಯ ಇಲಾಖೆಯ ಸಚಿವ ರಾಜ್‌ಕುಮಾರ್ ಬಡೋಲೆ, ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸರಕಾರ ಸೂಚನೆ ನೀಡಿದೆ ಎಂದು ತಿಳಿಸಿದರು. ಕುಷ್ಠರೋಗಿಗಳಿಗೆ ಬೆರಳಚ್ಚು ನೀಡಲು ಕಷ್ಟವಾಗುವ ಕಾರಣ ಅವರು ಆಧಾರ್ ಸಂಖ್ಯೆಯನ್ನು ಜೋಡಿಸುವುದು ಕಡ್ಡಾಯವಲ್ಲ.ಆದರೆ ಆಧಾರ್ ಸಂಖ್ಯೆ ಜೋಡಿಸದ ಕಾರಣ ಅವರು ಸರಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯುವುದರಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೆ ಈ ಕುರಿತ ಪ್ರಸ್ತಾವನೆಯನ್ನು ಕೇಂದ್ರ ಸರಕಾರಕ್ಕೆ ಕಳಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.



 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News