ಮಾ.24, 25 ರಂದು ರಾಹುಲ್ ಗಾಂಧಿ ಮೈಸೂರಿಗೆ

Update: 2018-03-23 11:55 GMT

ಮೈಸೂರು,ಮಾ.23: ರಾಜ್ಯ ರಾಜಕಾರಣ ಬಹಳ ಮಹತ್ತರ ಪಡೆದಿದ್ದು, ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಮಾ.24 ಹಾಗೂ 25 ರಂದು ಮೈಸೂರು ಭಾಗದಲ್ಲಿ ಪ್ರವಾಸ, ರೋಡ್ ಶೋ, ಹಾಗೂ ಬೃಹತ್ ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಎಂದು ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಸಿದರು.

ಮಾ.24 ಶನಿವಾರ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮಂಡಗಳ್ಳಿ ವಿಮಾನಿಲ್ದಾಣಕ್ಕೆ ಬೆಳಿಗ್ಗೆ 9 ಗಂಟೆಗೆ ಆಗಮಿಸಲಿದ್ದಾರೆ. ನಂತರ ನೇರವಾಗಿ ನಾಡ ಅಧಿದೇವತೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಶ್ರೀಚಾಮುಂಡೇಶ್ವರಿ ತಾಯಿ ದರ್ಶನ ಪಡೆಯಲಿದ್ದಾರೆ. ಬೆ.11 ಕ್ಕೆ ಮಹರಾಣಿ ವಿಜ್ಞಾನ ಹಾಗೂ ಕಲಾ ಕಾಲೇಜಿಗೆ ತೆರಳಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ನಂತರ ಚಾಮರಾಜನಗರಕ್ಕೆ ಭೇಟಿ ನೀಡಿ ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ ಎಂದು ಹೇಳಿದರು.

ಮಾ.25 ರ ರವಿವಾರ ಬೆಳಿಗ್ಗೆ ಮೈಸೂರಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಹಿರಿಯ ನಾಯಕರ ಜೊತೆ ಅನೌಪಚಾರಿಕ ಸಭೆ ನಡೆಸಲಿದ್ದಾರೆ. ನಂತರ ಮಂಡ್ಯ ಜಿಲ್ಲೆಯ ಮಳವಳ್ಳಿಗೆ ತೆರಳಿ ಸಭೆ ನಡೆಸುವರು. ಬಳಿಕ ಕೆ.ಆರ್.ಪೇಟೆಗೆ ತೆರಳುವರು. ಅಲ್ಲಿಂದ ಶ್ರೀರಂಗಪಟ್ಟಣದಲ್ಲಿ ರೊಡ್ ಶೋದಲ್ಲಿ ಭಾಗವಹಿಸುವರು. ಸಂಜೆ 4 ಗಂಟೆಗೆ ಮೈಸೂರು ನಗರದ ಗನ್ ಹೌಸ್ ಬಳಿಯ ಬಸವೇಶ್ವರ ವೃತ್ತದಿಂದ ನೂರಡಿ ರಸ್ತೆಯಲ್ಲಿ ರೋಡ್ ಶೋ ನಡೆಸಿ 5 ಗಂಟೆಗೆ ಮಹರಾಜ ಕಾಲೇಜು ಮೈದಾನದಲ್ಲಿ ಸುಮಾರು 2 ಲಕ್ಷ ಜನರ ಬೃಹತ್ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳುವರು ಎಂದು ಸಚಿವ ಮಹದೇವಪ್ಪ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರ ಕಾಂಗ್ರೆಸ್ ಅಧ್ಯಕ್ಷ ಮೂರ್ತಿ, ಮಾಜಿ ಮೇಯರ್ ಅಯೂಬ್ ಖಾನ್, ಕಾಂಗ್ರೆಸ್ ಮುಖಂಡರಾದ ಮಂಜುಳ ಮಾನಸ, ಶಿವಣ್ಣ, ಭಾಸ್ಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News