ಅನುದಾನ ಬಿಡುಗಡೆ ಮಾಡದಿದ್ದರೆ ಸಿಎಂ ಮನೆ ಮುಂದೆ ಧರಣಿ: ಶಾಸಕ ಹೆಚ್.ಎಸ್. ಪ್ರಕಾಶ್

Update: 2018-03-26 13:26 GMT

ಹಾಸನ,ಮಾ.26: ಜಿಲ್ಲೆಯಲ್ಲಿ ಬರಗಾಲದಿಂದ ತತ್ತರಿಸಿರುವ ತಾಲೂಕುಗಳಿಗೆ ಇದುವರೆಗೂ ಸರ್ಕಾರ ಅನುದಾನ ಬಿಡುಗಡೆ ಮಾಡದೆ ಮೀನಮೇಷ ಎನಿಸುತ್ತಿದೆ. ಶೀಘ್ರದಲ್ಲೇ ಅನುದಾನ ಬಿಡುಗಡೆ ಮಾಡದಿದ್ದರೆ ಮುಖ್ಯಮಂತ್ರಿಗಳ ಮನೆ ಮುಂದೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಶಾಸಕ ಹೆಚ್.ಎಸ್. ಪ್ರಕಾಶ್ ಎಚ್ಚರಿಸಿದರು. 

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬರಗಾಲ ಎಂದು ಸರ್ಕಾರವೇ ಘೋಷಣೆ ಮಾಡಿದೆ. ಆದರೆ ಇದುವರೆಗೂ ಹಣ ಬಿಡುಗಡೆ ಮಾಡಿಲ್ಲ. ಕುಡಿಯುವ ನೀರಿಗಾಗಿ ಜನರು ಪರಿತಪಿಸುತ್ತಿದ್ದಾರೆ, ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಗೆ ಯಾವುದೇ ಅನುದಾನ ಬಂದಿಲ್ಲ. ಆದ್ದರಿಂದ ತಕ್ಷಣವೇ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಎರಡು ಜಲಾಶಯಗಳಿದ್ದರೂ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳು, ಮಂತ್ರಿಗಳಿಗೂ ಮತ್ತು ಅಧಿಕಾರಿ ಗಳಿಗೆ ಹಲವು ಬಾರಿ ಮನವಿ ಮಾಡಿದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಪಟೇಲ್‍ಶಿವರಾಂ, ತಾಲೂಕು ಅಧ್ಯಕ್ಷ ತೊ.ಚ. ಅನಂತಸುಬ್ಬರಾಯ್, ಜಿಲ್ಲಾಧ್ಯಕ್ಷ ಕೆ.ಎಸ್.ಲಿಂಗೇಶ್, ಜಿಪಂ ಮಾಜಿ ಉಪಾಧ್ಯಕ್ಷ ಎಸ್. ದ್ಯಾವೇಗೌಡ ಇತರರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News