ಕೋಲಾರ: ಆಯಿಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ

Update: 2018-03-29 13:32 GMT

ಕೋಲಾರ,ಮಾ.29: ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿರುವ ಆಯಿಲ್ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಫ್ಯಾಕ್ಟರಿಯಲ್ಲಿರುವ ಆಯಿಲ್ ಡ್ರಮ್ ಗಳು ಬೆಂಕಿಯ ತೀವ್ರತೆಯಿಂದಾಗಿ ಸಿಡಿಯುತ್ತಿರುವ ಘಟನೆ ನಡೆದಿದೆ.

ಇಲ್ಲಿನ ಬನಶಂಕರಿ ಆಯಿಲ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದರಿಂದಾಗಿ ಅಕ್ಕಪಕ್ಕದ ಕಾರ್ಖಾನೆಗಳಿಗೂ ಬೆಂಕಿ ಹರಡುವ ಸಾಧ್ಯತೆಗಳಿದೆ. ಕಾರ್ಖಾನೆಯಲ್ಲಿ ಹಲವು ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿದ್ದು, ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News