ವಾಯುಭಾರ ಕುಸಿತ: ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ

Update: 2018-03-29 14:45 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ.29: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎರಡು ದಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೆಲವು ದಿನಗಳ ಹಿಂದೆಯೂ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗಿತ್ತು. ಇಂದು ಮತ್ತು ನಾಳೆ ಎರಡು ದಿನ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆಯಾಗುವ ಸಂಭವವಿದೆ. ನಗರದಲ್ಲಿ ಸಹ ಅಲ್ಲಲ್ಲಿ ಚದುರಿದ ಸಾಧಾರಣ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News