ಮಡಿಕೇರಿ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಎ.14 ರ ವರೆಗೆ ಅವಕಾಶ; ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ

Update: 2018-04-02 17:37 GMT

ಮಡಿಕೇರಿ, e.2: ಹದಿನೆಂಟು ವರ್ಷ ಪೂರ್ಣಗೊಂಡವರು ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಎಪ್ರಿಲ್ 14 ರ ವರೆಗೆ ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ.   

ಹದಿನೆಂಟು ವರ್ಷ ಪೂರ್ಣಗೊಂಡವರು ಮತದಾನದಿಂದ ಯಾವುದೇ ಕಾರಣಕ್ಕೂ ವಂಚಿತರಾಗಬಾರದು ಎಂಬ ಉದ್ದೇಶದಿಂದ ಚುನಾವಣಾ ಆಯೋಗ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಯಾಗಲು ಅವಕಾಶ ಮಾಡಿದ್ದು, ಅರ್ಹರು ಈ ಅವಕಾಶ ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೋರಿದ್ದಾರೆ. 

ಇದೇ ಏಪ್ರಿಲ್ 8 ರಂದು ಜಿಲ್ಲೆಯ ಬೂತ್ ಮಟ್ಟದಲ್ಲಿ, ತಹಶೀಲ್ದಾರರ ಹಾಗೂ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆ ಕುರಿತು ವಿಶೇಷ ಅಭಿಯಾನ ನಡೆಯಲಿದ್ದು, ಈ ಅವಕಾಶವನ್ನು ಹದಿನೆಂಟು ವರ್ಷ ಪೂರ್ಣಗೊಂಡವರು ಪಡೆದುಕೊಳ್ಳುವಂತಾಗಬೇಕು ಎಂದು ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ.

ರಾಜಕೀಯ ಪಕ್ಷಗಳು ಸಭೆ-ಸಮಾರಂಭ ನಡೆಸಲು ಮತ್ತು ಪ್ರಚಾರಕ್ಕೆ ವಾಹನ ಬಳಸಲು ಆಯಾಯ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ(ಆರ್‍ಒ) ಅವರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಿದ 24 ಗಂಟೆಯೊಳಗೆ ಅನುಮತಿ ದೊರೆಯಲಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದ್ದಾರೆ.   

ಬಸ್, ಕಾರು, ಹೀಗೆ ಯಾವುದೇ ರೀತಿಯಲ್ಲಿ 50 ಸಾವಿರ ರೂ ಮೇಲ್ಪಟ್ಟು ನಗದು ಹಣವನ್ನು ತೆgeದುಕೊಂಡು ಹೋಗುತ್ತಿದ್ದಲ್ಲಿ ದಾಖಲೆ ಸಲ್ಲಿಸಬೇಕಿದೆ. 10 ಲಕ್ಷಕ್ಕೂ ಹೆಚ್ಚು ನಗದು ಹಣ ತೆಗೆದುಕೊಂಡು ಹೋಗುತ್ತಿದ್ದಲ್ಲಿ ಆದಾಯ ತೆರಿಗೆ ಇಲಾಖೆಯ ಶಿಫಾರಸು ಪತ್ರ ಹೊಂದಿರಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News