ಎಸ್ಸಿ ಎಸ್ಟಿ ದೌರ್ಜನ್ಯ ಕಾಯ್ದೆ ತೀರ್ಪು ಜನರನ್ನು ಘಾಸಿಗೊಳಿಸಿದೆ: ಸಚಿವ ಡಾ.ಎಚ್.ಸಿ.ಮಹದೇವಪ್ಪ

Update: 2018-04-04 15:04 GMT

ಮೈಸೂರು,ಎ.4: ಪರಿಶಿಷ್ಟ ಜಾತಿ, ಪಂಗಡ ದೌರ್ಜನ್ಯ ಕಾಯ್ದೆ ಕುರಿತ ಸುಪ್ರೀಂ ಕೋರ್ಟ್ ತೀರ್ಪು ಜನರನ್ನು ಘಾಸಿಗೊಳಿಸಿದೆ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.

ನಗರದ ವಿಜಯನಗರದಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ಪಂಗಡ ದೌರ್ಜನ್ಯ ಕಾಯ್ದೆ ಕುರಿತ ಸುಪ್ರೀಂ ಕೋರ್ಟ್ ತೀರ್ಪು ಜನರನ್ನು ಘಾಸಿಗೊಳಿಸಿದ್ದು, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದರು.

ಸುಪ್ರೀಂ ಕೋರ್ಟ್ ತೀರ್ಪಿಗೆ ಸಂಬಂಧಿಸಿದಂತೆ ಭಾರತ್ ಬಂದಗೆ ಕರೆ ನೀಡಿದ್ದ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ದೇಶದ ಉದ್ದಗಲಕ್ಕೂ ಹನ್ನೊಂದು ಜನರು ಮೃತಪಟ್ಟಿದ್ದಾರೆ. ಆದರೆ ಪ್ರಧಾನ ಮಂತ್ರಿಗಳು ಮೌನವಾಗಿದ್ದಾರೆ. ಅಂಬೇಡ್ಕರ್ ಅವರಿಂದಲೇ ಪ್ರಧಾನಿಯಾದೆ ಎಂದು ಹೇಳಿಕೊಳ್ಳುವ ಪ್ರಧಾನಿ ಅವರು ಕೂಡಲೇ ವಿಶೇಷ ಅಧಿವೇಶನ ಕರೆದು ಚರ್ಚಿಸಬೇಕು. ಅವರ ಸಚಿವ ಸಂಪುಟದ ಸದಸ್ಯರು ಸಂವಿಧಾನ ಬದಲಾವಣೆ ಹೇಳಿಕೆ ನೀಡಿದಾಗಲೂ ಮಾತನಾಡಲಿಲ್ಲ. ಪ್ರಧಾನಿಗಳು ನಿರ್ಲಿಪ್ತವಾಗಿದ್ದಾರೆ. ಈಗಲೂ ಮಾತನಾಡದೇ ಇದ್ದರೆ ಹೇಗೆ ಎಂದು ಪ್ರಶ್ನಿಸಿದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News