ಮೈಸೂರು: ದ್ವಿಚಕ್ರ ವಾಹನಗಳ ಢಿಕ್ಕಿ; ಓರ್ವ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

Update: 2018-04-07 17:43 GMT

ಮೈಸೂರು,ಎ.7: ಮೂರು ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿ ಒಬ್ಬರು ಸ್ಥಳದಲ್ಲಿಯೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಹದೇವಪುರ ರಿಂಗ್ ರಸ್ತೆಯಲ್ಲಿ ನಡೆದಿದೆ.

ಮೃತನನ್ನು ಕಾಮನಕೆರೆಹುಂಡಿಯ ರಾಮು (30) ಎನ್ನಲಾಗಿದ್ದು, ಶಿವಣ್ಣ, ಮತ್ತು ಅವರ ಜೊತೆಗಿದ್ದ ವ್ಯಕ್ತಿ ಗಾಯಗೊಂಡಿದ್ದಾರೆ. ಮಹದೇವಪುರ ರಿಂಗ್ ರಸ್ತೆಯಲ್ಲಿ ರಾತ್ರಿ 7.50ಕ್ಕೆ ಹೀರೋ ಹೋಂಡಾ, ಡಿಸ್ಕವರ್ ಹಾಗೂ ಯಮಹ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಕೊಲಂಬಿಯಾ ಏಷಿಯಾ ಜಂಕ್ಷನ್‍ನಿಂದ ಮಹದೇವಪುರದ ಕಡೆಗೆ ಸಾಗುತ್ತಿದ್ದ ಬೈಕ್‍ಗಳಿಗೆ, ಹಿಂದಿನಿಂದ ಬಂದ ಯಮಹ ಬೈಕ್ ಗುದ್ದಿದೆ. ಅಪಘಾತದ ರಭಸಕ್ಕೆ ಯಮಹ ಬೈಕ್ 20 ಭಾಗಗಳಾಗಿ ಛಿದ್ರವಾಗಿದೆ. ಈ ವೇಳೆ ರಾಮು ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈ ಸಂಬಂಧ ಸಿದ್ಧಾರ್ಥ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News