ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ರಾಹುಲ್ ಗಾಂಧಿ ಉತ್ತರಿಸಿದ್ದು ಹೀಗೆ…

Update: 2018-04-08 06:43 GMT

ಬೆಂಗಳೂರು, ಎ.8: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪತ್ರಕರ್ತರ ಪ್ರಶ್ನೆಗೆ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರತ್ತ ಕೈ ತೋರಿಸುವ ಮೂಲಕ ಸುದ್ದಿಗೆ ಗುದ್ದು ನೀಡಿದ್ದಾರೆ.

ರವಿವಾರ ಬೆಂಗಳೂರಿನ ಹೋಟೆಲೊಂದರಲ್ಲಿ ನಡೆದ ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ರಾಹುಲ್ ಮಾತನಾಡಿದರು.

ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾನು ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದಾಗಿ ಹೇಳಿಕೆ ನೀಡಿದ್ದರು.  ಆದರೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿಯ ಆಯ್ಕೆ ನಡೆಯಲಿದೆ ಎಂದು ಕಾಂಗ್ರೆಸ್‌ ಕೆಲವು ನಾಯಕರು ಪ್ರತಿಕ್ರಿಯೆ ನೀಡಿದ್ದರು.

ಸಿದ್ದರಾಮಯ್ಯ ಅವರು ಎರಡು ಕಡೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರದ ಬಗ್ಗೆ ಪತ್ರಕರ್ತರು ಗಮನ ಸೆಳೆದಾಗ ಅದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಟ್ಟ ವಿಚಾರ ಎಂದರು.

ಮಠಗಳಲ್ಲಿ ನಾನು ರಾಜಕೀಯ ವಿಚಾರಗಳ ಚರ್ಚೆ ಮಾಡಿಲ್ಲ. ನನಗೆ ಆಧ್ಯಾತ್ಮಿಕ ವಿಚಾರಗಳಲ್ಲಿ ಆಸಕ್ತಿ ಇದೆ. ಈ ಕಾರಣಕ್ಕಾಗಿ ಮಠಮಾನ್ಯಗಳಿಗೆ ಭೇಟಿ ನೀಡುತ್ತಿರುವುದಾಗಿ ರಾಹುಲ್ ಗಾಂಧಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News