ಮಂಗಳೂರು: ವಿದ್ಯುತ್ ಟ್ರಾನ್ಸ್‌ಫಾರ್ಮರ್ ಮೇಲೆ ಬಿದ್ದ ಮರ
Update: 2018-08-16 08:50 GMT
ಮಂಗಳೂರು, ಆ.16: ಭಾರೀ ಮಳೆ, ಗಾಳಿಗೆ ದ.ಕ. ಜಿಲ್ಲಾ ಎಸ್ಪಿಕಚೇರಿ ಆವರಣದೊಳಗೆ ಮರ ಉರುಳಿ ಬಿದ್ದ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ಮರವು ಟ್ರಾನ್ಸ್‌ಫಾರ್ಮರ್ ಮೇಲೆ ಬಿದ್ದುದರಿಂದ ಟ್ರಾನ್ಸ್‌ಫಾರ್ಮರ್ ಹಾಗೂ ಎರಡು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಮರವನ್ನು ತೆರವುಗೊಳಿಸಿದರು.