ಅ.18ರವರಗೆ ವಾಹನ ಸಂಚಾರದಲ್ಲಿ ಮಾರ್ಪಾಡು: ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್
ಮಂಗಳೂರು, ಅ.10:ಕಟೀಲು ಶ್ರಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ಅ.18ರವರೆಗೆ ವಾಹನ ಸಂಚಾರದಲ್ಲಿ ತಾತ್ಕಾಲಿಕ ಮಾರ್ಪಾಡು ಮಾಡಿ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಆದೇಶಿಸಿದ್ದಾರೆ.
ಮಂಗಳೂರು ಬಜಪೆ ಕಡೆಯಿಂದ ಕಟೀಲಿಗೆ ಬರುವ ವಾಹನಗಳು ಮಲ್ಲಿಗೆಯಂಗಡಿ ಕ್ರಾಸ್‌ನಿಂದ ಏಕಮುಖವಾಗಿ ಚಲಿಸಿ ಗಿಡಿಗೆರೆ ರಸ್ತೆ ಮೂಲಕ ಕಟೀಲು ಕಾಲೇಜು ಮುಖ್ಯ ರಸ್ತೆಯನ್ನು ಸೇರುವುದು. ಕಟೀಲಿನಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳು ದೇವಸ್ಥಾನದ ಪದವಿ ಪೂರ್ವ ಕಾಲೇಜು ಮೈದಾನದ ಮೂಲಕ ವಿಜಯ ಬ್ಯಾಂಕ್ ಎದುರುಗಡೆ ರಸ್ತೆಯಲ್ಲಿ ಚಲಿಸಿ, ಬಜಪೆ-ಮಂಗಳೂರು ಕಡೆಗೆ ಹೋಗುವುದು. ಕಾರು ಹಾಗೂ ಇತರ ವಾಹನಗಳಿಗೆ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪಾರ್ಕಿಂಗ್‌ಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಬಸ್ಸುಗಳು ಎಂದಿನಂತೆ ಬಸ್ಸು ನಿಲ್ದಾಣಕ್ಕೆ ಬಂದು ಹೋಗಬಹುದು ದೇವಸ್ಥಾನದ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಿಂದ ವಿಜಯಬ್ಯಾಂಕ್‌ವರೆಗಿನ ಇಕ್ಕೆಲಗಳಲ್ಲಿ ವಾಹನ ನಿಲುಗಡೆಯನ್ನು ಸಂಪೂರ್ಣ ನಿಷೇಧಿಸಿದೆ. ಈ ನಿರ್ಬಂಧನೆಗಳು ಪೊಲೀಸ್ ಹಾಗೂ ತುರ್ತು ಸೇವೆಯ ವಾಹನಗಳಿಗೆ ಅನ್ವಯಸುವುದಿಲ್ಲ ಎಂದು ಪ್ರಕಟನೆ ತಿಳಿಸಿದೆ.