ಡಾ. ಕುಮಾರಚಲ್ಯ ಅವರಿಗೆ ಮುದ್ದಣ ಕಾವ್ಯ ಪ್ರಶಸ್ತಿ

Update: 2018-10-31 14:57 GMT
ಡಾ.ಕುಮಾರ ಚಲ್ಯ

ಮೂಡುಬಿದಿರೆ, ಅ.31: ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್‍ನ ಪ್ರಾಯೋಜಕತ್ವದ 2018ರ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಶಿವಮೊಗ್ಗದ ಡಾ. ಕುಮಾರಚಲ್ಯ ಅವರ 'ಗುಲಾಬಿ ಮತ್ತು ಪಾರಿವಾಳ' ಎಂಬ ಕವನಸಂಕಲನ ಹಸ್ತಪ್ರತಿಯು ಗೆದ್ದುಕೊಂಡಿದೆ ಎಂದು ಸಂಘದ ಸ್ಥಾಪಕಾಧ್ಯಕ್ಷರಾದ ಡಾ. ನಾ.ಮೊಗಸಾಲೆಯವರು ಘೋಷಿಸಿದ್ದಾರೆ.

ಈ ಸಾಲಿನ ಸ್ಪರ್ಧೆಗೆ ಒಟ್ಟು ಅರವತ್ತೆಂಟು ಹಸ್ತಪ್ರತಿಗಳು ಬಂದಿದ್ದು,  ಶ್ರೀ ಸುಬ್ರಾಯ ಚೊಕ್ಕಾಡಿ , ಡಾ. ಬಸವರಾಜ ಕಲ್ಗುಡಿ,  ಡಾ. ನೆಲ್ಲಿಕಟ್ಟೆ ಎಸ್. ಸಿದ್ಧೇಶ್ ಅವರುಗಳು ನೀಡಿದ ಅಂಕಗಳ ಆಧಾರದಲ್ಲಿ ಈ ಪ್ರಶಸ್ತಿಯನ್ನು ನಿರ್ಣಯಿಸಲಾಗಿದೆ.

1979ರಲ್ಲಿ ನಂದಳಿಕೆಯ ವರಕವಿ ಮುದ್ದಣನ ಹೆಸರಿನಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಯು  ಹತ್ತು ಸಾವಿರದ ಗೌರವ ಸಂಭಾವನೆ ಮತ್ತು ಸನ್ಮಾನವನ್ನು ಒಳಗೊಂಡಿದ್ದು ಪ್ರತೀ ವರುಷದಂತೆ ಈ ವರುಷದ ಪ್ರಶಸ್ತಿ ಪ್ರದಾನ ಸಮಾರಂಭವು 2019ರ ಫೆಬ್ರವರಿ ತಿಂಗಳಲ್ಲಿ ಕಾಂತಾವರದ 'ಕನ್ನಡಭವನ'ದಲ್ಲಿ ನಡೆಯಲಿದ್ದು ಪ್ರಶಸ್ತಿಯ ಪ್ರಾಯೋಜಕರಾದ ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು ಅವರು ಪ್ರಶಸ್ತಿ ಪ್ರದಾನವನ್ನು ನೆರವೇರಿಸಲಿರುವರು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸದಾನಂದ ನಾರಾವಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News