ನ. 5ರಂದು ಸಂಸತ್ತಿನ ಅಧಿವೇಶನ: ರಾಜಪಕ್ಸ

Update: 2018-11-01 15:22 GMT

ಕೊಲಂಬೊ, ನ. 1: ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ನವೆಂಬರ್ 5ರಂದು ಸಂಸತ್ತಿನ ಅಧಿವೇಶನ ಕರೆಯುವರು ಎಂದು ಹೊಸದಾಗಿ ನೇಮಕಗೊಂಡಿರುವ ಪ್ರಧಾನಿ ಮಹಿಂದ ರಾಜಪಕ್ಸ ಗುರುವಾರ ಹೇಳಿದ್ದಾರೆ.

ಹಿಂದೂ ಮಹಾಸಾಗರದ ದ್ವೀಪರಾಷ್ಟ್ರದಲ್ಲಿ ತಲೆದೋರಿರುವ ಬಿಕ್ಕಟ್ಟನ್ನು ಶೀಘ್ರವಾಗಿ ಬಗೆಹರಿಸುವಂತೆ ಅಂತಾರಾಷ್ಟ್ರೀಯ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.

 ಪ್ರಧಾನಿ ರನಿಲ್ ವಿಕ್ರಮೆಸಿಂೆ ಸರಕಾರವನ್ನು ಶುಕ್ರವಾರ ದಿಢೀರನೆ ವಜಾಗೊಳಿಸಿದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ, ಚೀನಾ ಪರ ಒಲವುಳ್ಳ ಮಹಿಂದ ರಾಜಪಕ್ಸರನ್ನು ನೂತನ ಪ್ರಧಾನಿಯಾಗಿ ನೇಮಿಸಿರುವುದನ್ನು ಸ್ಮರಿಸಬಹುದಾಗಿದೆ.

ತನ್ನ ಸರಕಾರವನ್ನು ವಜಾಗೊಳಿಸಿರುವುದು ಅಸಾಂವಿಧಾನಿಕ ಎಂದು ಬಣ್ಣಿಸಿರುವ ವಿಕ್ರಮೆಸಿಂೆ, ಸಂಸತ್ತಿನಲ್ಲಿ ತನ್ನ ಬಹುಮತವನ್ನು ಸಾಬೀತುಪಡಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಗುರುವಾರ ಪ್ರಧಾನಿ ಕಚೇರಿಯಲ್ಲಿ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ರಾಜಪಕ್ಸ, ‘‘ನವೆಂಬರ್ 5ರಂದು ಸಂಸತ್ತಿನ ಅಧಿವೇಶನವನ್ನು ಕರೆಯಲು ಅಧ್ಯಕ್ಷರು ತೀರ್ಮಾನಿಸಿದ್ದಾರೆ’’ ಎಂದು ಹೇಳಿದರು.

ಇದಕ್ಕೂ ಮೊದಲು, ಅಧ್ಯಕ್ಷ ಸಿರಿಸೇನ ಸಂಸತ್ತನ್ನು ನವೆಂಬರ್ 16ರವರೆಗೆ ಅಮಾನತ್ತಿಲ್ಲಿಟ್ಟಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News