ನ.11: ಕೀರ್ತಿಶೇಷ ಲೋಲಮ್ಮ ಪಚ್ಚನಾಡಿ ಶತಮಾನ ಸಂಭ್ರಮ
ಮಂಗಳೂರು, ನ.8: ಕೀರ್ತಿಶೇಷ ಲೋಲಮ್ಮ ಪಚ್ಚನಾಡಿ ಸೇವಾ ಪ್ರತಿಷ್ಠಾನದಿಂದ ಸಮಾಜಮುಖಿ ಚಟುವಟಿಕೆಗಳನ್ನು ನಡೆಸುವ ಧ್ಯೇಯ, ಉದ್ದೇಶಗಳಿಂದ ಬೆಳೆದು ಬಂದಿದ್ದು, ಕೀರ್ತಿಶೇಷ ಲೋಲಮ್ಮ ಪಚ್ಚನಾಡಿ ಶತಮಾನ ಸಂಭ್ರಮವನ್ನು ನ.11ರಂದು ಸಂಜೆ 4 ಗಂಟೆಗೆ ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೀರ್ತಿಶೇಷ ಲೋಲಮ್ಮ, ಪಚ್ಚನಾಡಿ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪಚ್ಚನಾಡಿ ರಾಮ ಅಮೀನ್, ನ.11ರಂದು ಸಂಜೆ 6ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಶತಮಾನ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದರು.
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಭಾಸ್ಕರ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವೇದಮೂರ್ತಿ ಲಕ್ಷ್ಮೀನಾರಾಯಣ ಆಸ್ರಣ್ಣ ಕಟೀಲು ಆಶೀರ್ವಚನ ನೀಡಲಿದ್ದಾರೆ. ಸಂಸದ ನಳಿನ್‌ಕುಮಾರ್ ಕಟೀಲು, ದ.ಕ. ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಶಾಸಕರಾದ ಸಂಜೀವ ಮಠಂದೂರು, ವೇದವ್ಯಾಸ್ ಕಾಮತ್, ಡಾ.ವೈ.ಭರತ್ ಶೆಟ್ಟಿ ಮತ್ತಿತರರು ಭಾಗವಹಿಸಲಿದ್ದಾರೆ. ಸಂಜೆ 4ರಿಂದ ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ‘ಶ್ರೀದೇವಿ ಮಹಿಷ ಮರ್ದಿನಿ’ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ವಿನೋದ್‌ಕುಮಾರ್ ಮಣ್ಣಗುಡ್ಡೆ, ಪ್ರಮೀಳಾ ಪಂಜಿಮೊಗರು ಮತ್ತಿತರರು ಉಪಸ್ಥಿತರಿದ್ದರು.