ಪ್ರವಾದಿ ಜನ್ಮ ದಿನಾಚರಣೆ ಕಾರ್ಯಕ್ರಮದ ಮೇಲೆ ಬಾಂಬ್ ದಾಳಿ: 50ಕ್ಕೂ ಹೆಚ್ಚು ಮಂದಿ ಮೃತ್ಯು

Update: 2018-11-20 16:44 GMT

ಕಾಬುಲ್, ನ.20: ಆತ್ಮಾಹುತಿ ಬಾಂಬರ್ ಒಬ್ಬ ನಡೆಸಿದ ದಾಳಿಯಲ್ಲಿ 50ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಅಫ್ಘಾನಿಸ್ತಾನದ ರಾಜಧಾನಿ ಕಾಬುಲ್ ನಲ್ಲಿ ನಡೆದಿದೆ.

ದಾಳಿಯಲ್ಲಿ 70 ಮಂದಿ ಗಾಯಗೊಂಡಿದ್ದಾರೆ ಎಂದು ಆಂತರಿಕ ಸಚಿವಾಲಯದ ವಕ್ತಾರ ನಜೀಬ್ ದಾನಿಶ್ ತಿಳಿಸಿದ್ದಾರೆ. “ಪ್ರವಾದಿ ಜನ್ಮ ದಿನಾಚರಣೆಯಂಗವಾಗಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಆತ್ಮಾಹುತಿ ಬಾಂಬರ್ ಒಬ್ಬ ದಾಳಿ ನಡೆಸಿದ್ದು, ತನ್ನನ್ನು ಸ್ಫೋಟಿಸಿಕೊಂಡಿದ್ದಾನೆ” ಎಂದವರು ವಿವರಿಸಿದ್ದಾರೆ,

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News