ನವೆಂಬರ್, ಡಿಸೆಂಬರ್ ನಲ್ಲಿ ಇಂದ್ರಧನುಷ್ ಲಸಿಕಾ ಅಭಿಯಾನ: ಜಾವೀದ್ ಅಕ್ತರ್

Update: 2018-11-23 17:31 GMT

ಬೆಂಗಳೂರು, ನ.23: ರಾಜ್ಯದ ಚಿಕ್ಕಮಗಳೂರು, ಚಿತ್ರದುರ್ಗ, ಗದಗ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ 2018 ರ ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ಇಂದ್ರಧನುಷ್ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೀದ್ ಅಕ್ತರ್ ತಿಳಿಸಿದರು.

ಇದು ಎರಡನೇ ಹಂತದ ಲಸಿಕಾ ಕಾರ್ಯಕ್ರಮವಾಗಿದ್ದು, ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳಿಗೆ ಸಮರ್ಪಕವಾಗಿ ಲಸಿಕೆ ಕೊಡುವುದು ಮುಖ್ಯವಾಗಿದೆ. ಈ ಕಾರ್ಯಕ್ರಮ ಶೇ.90 ರಷ್ಟು ಯಶಸ್ಸನ್ನು ಈಗಾಗಲೇ ಗಳಿಸಿದೆ. ಎರಡನೆ ಸುತ್ತಿನ ಲಸಿಕೆ ಕಾರ್ಯಕ್ರಮವು ನ.22 ರಂದೇ ಪ್ರಾರಂಭವಾಗಿದೆ. ಮೂರನೆ ಹಂತದ ಲಸಿಕಾ ಕಾರ್ಯಕ್ರಮ ಡಿ.22 ರಿಂದ ಪ್ರಾರಂಭವಾಗಲಿದೆ. ರಾಜ್ಯದಲ್ಲಿ ಈಗಾಗಲೇ 19.58 ಲಕ್ಷ ಮಕ್ಕಳಿಗೆ ಹಾಗೂ 5.22 ಲಕ್ಷ ಗರ್ಭಿಣಿ ಸ್ತ್ರೀಯರಿಗೆ ಲಸಿಕೆಯನ್ನು ನೀಡಲಾಗಿದೆ ಎಂದರು.

ಬಿಬಿಎಂಪಿ ಸೇರಿದಂತೆ ಆರೋಗ್ಯ, ಶಿಕ್ಷಣ, ಕಾರ್ಮಿಕ ಇಲಾಖೆಯ ಸಹಕಾರದೊಂದಿಗೆ ಈ ಐದು ಜಿಲ್ಲೆಗಳಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅವರು ಕೋರಿದರು. ಈ ವೇಳೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ರತನ್ ಖೇಳ್ಕರ್ ಸಭೆಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News