ವಾಯುಭಾರ ಕುಸಿತ; ಆಂಧ್ರದ ಕರಾವಳಿಯಲ್ಲಿ ಚಂಡಮಾರುತದ ಸಾಧ್ಯತೆ

Update: 2018-12-13 15:17 GMT

ಹೊಸದಿಲ್ಲಿ, ಡಿ.13: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತ ಶುಕ್ರವಾರ ಬೆಳಿಗ್ಗೆಯ ವೇಳೆ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ. ಗುರುವಾರ ಮಧ್ಯರಾತ್ರಿಯ ಬಳಿಕ ಚಂಡಮಾರುತ ಆಂಧ್ರಪ್ರದೇಶ ಮತ್ತು ಉತ್ತರ ತಮಿಳುನಾಡಿನತ್ತ ಸಾಗಲಿದೆ .

ಇದರಿಂದಾಗಿ ಡಿಸೆಂಬರ್ 15 ಮತ್ತು 16ರಂದು ದಕ್ಷಿಣ ಆಂಧ್ರ ಕರಾವಳಿ, ಉತ್ತರ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಡಿಸೆಂಬರ್ 14ರಂದು ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಗಂಟೆಗೆ 80 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News