ರಾಜಸ್ಥಾನ ಸಿಎಂ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ, ಸಿದ್ದರಾಮಯ್ಯ, ದೇವೇಗೌಡ ಭಾಗಿ

Update: 2018-12-17 10:46 GMT

ಬೆಂಗಳೂರು, ಡಿ. 17: ರಾಜಸ್ಥಾನ ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್, ಉಪ ಮುಖ್ಯಮಂತ್ರಿಯಾಗಿ ಸಚಿನ್ ಪೈಲಟ್ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ ಸಮಾರಂಭದಲ್ಲಿ ಮುಖ್ಯಮಂತ್ರಿ ಕುಮಾರ ಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಾಜರಿದ್ದು ನೂತನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರಿಗೆ ಶುಭ ಹಾರೈಸಿದರು.

ರಾಜಸ್ಥಾನದ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಗೆಹ್ಲೋಟ್ ರಾಜಸ್ಥಾನದ 22ನೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಮೂರನೇ ಬಾರಿ ರಾಜಸ್ಥಾನದ ಮುಖ್ಯ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಗೆಹ್ಲೋಟ್ ಮತ್ತು ಡಿಸಿಎಂ ಸಚಿನ್ ಪೈಲೆಟ್ ಗೆ ರಾಜ್ಯಪಾಲ ಕಲ್ಯಾಣ್ ಸಿಂಗ್ ಪ್ರಮಾಣ ವಚನ ಬೋಧಿಸಿದರು.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿಗಳಾದ ಡಾ.ಮನ್ ಮೋಹನ್ ಸಿಂಗ್, ಆಂಧ್ರ ಪ್ರದೇಶ ಮುಖ್ಯ ಮಂತ್ರಿ ಚಂದ್ರಬಾಬು ನಾಯ್ಡು ಮತ್ತಿತರರು ಸಮಾರಂಭದಲ್ಲಿ ಭಾಗವಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News