ಆಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ: ಕ್ರಿಶ್ಚಿಯನ್ ಮಿಶೆಲ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ದಿಲ್ಲಿ ಕೋರ್ಟ್

Update: 2018-12-19 14:59 GMT

ಹೊಸದಿಲ್ಲಿ, ಡಿ.19: ಆಗಸ್ಟಾ ವೆಸ್ಟ್‌ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬ್ರಿಟಿಷ್ ಪ್ರಜೆ ಕ್ರಿಶ್ಚಿಯನ್ ಮಿಶೆಲ್ ಸಲ್ಲಿಸಿದ್ದ ಜಾಮೀನು ಅರ್ಜಿಯ ಕುರಿತ ತೀರ್ಪನ್ನು ದಿಲ್ಲಿಯ ನ್ಯಾಯಾಲಯ ಕಾಯ್ದಿರಿಸಿದೆ.

ಮಿಶೆಲ್‌ನನ್ನು ಡಿಸೆಂಬರ್ ಪ್ರಥಮ ವಾರದಲ್ಲಿ ಯುಎಇ ಭಾರತಕ್ಕೆ ಗಡೀಪಾರು ಮಾಡಿದ ಬಳಿಕ ಕಳೆದ 15 ದಿನದಿಂದ ನ್ಯಾಯಾಂಗ ಕಸ್ಟಡಿಯಲ್ಲಿದ್ದಾನೆ. ಮಿಶೆಲ್‌ರನ್ನು ಮತ್ತಷ್ಟು ವಿಚಾರಣೆ ನಡೆಸುವ ಅಗತ್ಯವಿಲ್ಲ. ಆದ್ದರಿಂದ ಅವರ ಕಸ್ಟಡಿ ಅವಧಿ ಅಂತ್ಯಗೊಳಿಸಿ ಜಾಮೀನು ಮಂಜೂರುಗೊಳಿಸಬೇಕೆಂದು ಅವರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ತೀರ್ಪನ್ನು ಡಿಸೆಂಬರ್ 22ಕ್ಕೆ ಕಾಯ್ದಿರಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News