​ಬಿಬಿಎಂಪಿ: ಪ್ಲಾಸ್ಟಿಕ್ ಸಾಮಗ್ರಿಗಳ ಬಳಕೆ ನಿಷೇಧ

Update: 2018-12-23 17:14 GMT

ಬೆಂಗಳೂರು, ಡಿ.23: ಪಾಲಿಕೆ ವತಿಯಿಂದ ಆಯೋಜಿಸಲ್ಪಡುವ ಅಧಿಕಾರಿಗಳ ಸಭೆ, ಸಮಾರಂಭಗಳಲ್ಲಿ ಹಾಗೂ ಪಾಲಿಕೆಯ ಕೇಂದ್ರ ಮತ್ತು ಅಧೀನ ಕಚೇರಿಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್‌ಗಳನ್ನು ಹಾಗೂ ಇತರೆ ಪ್ಲಾಸ್ಟಿಕ್ ಸಾಮಗ್ರಿಗಳ ಬಳಕೆಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಿಷೇಧಿಸಲು ಆದೇಶ ಹೊರಡಿಸಿದೆ.

ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳು ಮತ್ತು ದೈನಂದಿನ ಬಳಕೆಯಲ್ಲಿರುವ ಪ್ಲಾಸ್ಟಿಕ್ ಸಾಮಗ್ರಿಗಳಾದ ಪ್ಲಾಸ್ಟಿಕ್ ತಟ್ಟೆ, ಲೋಟ, ಚಮಚ ಹಾಗೂ ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಬಳಕೆಯನ್ನು ಹಾಗೂ ಮರು ಬಳಕೆ ಮಾಡಲಾಗದ ಪ್ಲಾಸ್ಟಿಕ್ ನೀರಿನ ಬಾಟಲ್‌ಗಳನ್ನು ಎಲ್ಲಾ ಬಿಬಿಎಂಪಿ ಕೇಂದ್ರ ಕಚೇರಿಗಳಲ್ಲಿ ಹಾಗೂ ಪಾಲಿಕೆಯ ಎಲ್ಲಾ ಅಧೀನ ಕಚೇರಿಗಳಲ್ಲಿ ಮತ್ತು ಪಾಲಿಕೆ ವತಿಯಿಂದ ಕೈಗೊಳ್ಳುವ ಎಲ್ಲಾ ಸರಕಾರಿ ಕಾರ್ಯಕ್ರಮಗಳಲ್ಲಿ ನಿಷೇಧ ಮಾಡಲು ಆದೇಶ ಮಾಡಲಾಗಿದೆ.

ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಮತ್ತು ಆರೋಗ್ಯಕ್ಕೆ ಹಾನಿಕಾರಕವಾಗುತ್ತದೆ. ಹಾಗಾಗಿ, ಪ್ಲಾಸ್ಟಿಕ್ ಸಾಮಗ್ರಿಗಳ ಬಳಕೆಯನ್ನು ನಿಷೇಧಿಸುವ ಸಂಬಂಧ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದೆ. ನೀರಿನ ಪ್ಲಾಸ್ಟಿಕ್ ಬಾಟಲ್‌ಗಳ ಬಳಕೆಯಿಂದಾಗಿ ಪಾಲಿಕೆಯ ಬೊಕ್ಕಸಕ್ಕೆ ದುಬಾರಿ ವೆಚ್ಚವಾಗುತ್ತಿರುವುದರಿಂದ. ರಾಜ್ಯ ಸರಕಾರ ಆದೇಶಿಸಿರುವಂತೆಯೇ ಪಾಲಿಕೆ ವ್ಯಾಪ್ತಿಯಲ್ಲಿಯೂ ಎಲ್ಲಾ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಲು ಪಾಲಿಕೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಪಾಲಿಕೆ ತಿಳಿಸಿದೆ.

ಸಾಮೂಹಿಕ ಕುಡಿಯುವ ನೀರಿನ ವ್ಯವಸ್ಥೆ

ಪಾಲಿಕೆಯಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್‌ಗಳ ಬಳಕೆಯನ್ನು ನಿಷೇಧಿಸಿ ಆದೇಶವನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲು. ಪರ್ಯಾಯವಾಗಿ ಪ್ರತಿ ಕಚೇರಿಗೆ ಅಗತ್ಯವಿರುವ ಸಾಮೂಹಿಕ ಕುಡಿಯುವ ನೀರಿನ ವಿತರಣಾ ವ್ಯವಸ್ಥೆಯನ್ನು ಮಾಡಲು ನಿರ್ಧರಿಸಲಾಗಿದ್ದು, ಆರ್.ಓ-ಯು.ವಿ ನೀರಿನ ಶುದ್ಧೀಕರಣ ಘಟಕ, ಕುಡಿಯುವ ನೀರಿನ ಸ್ಟೀಲ್ ಅಥವಾ ಗಾಜಿನ ಬಾಟಲಿಗಳು ಹಾಗೂ ಲೋಟಗಳನ್ನು ಖರೀದಿಸಲು ಪಾಲಿಕೆಯು ಎಲ್ಲಾ ಬಿಬಿಎಂಪಿ ಕಚೇರಿಗಳ ಇಲಾಖಾ ಮುಖ್ಯಸ್ಥರಿಗೂ ಸೂಚಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News