ಆ್ಯಂಬಿಡೆಂಟ್ ವಂಚನೆ ಪ್ರಕರಣ: ಹಣದ ಮೂಲದ ಬಗ್ಗೆ ತನಿಖೆ ಕೈಗೊಂಡ ಸಿಸಿಬಿ
Update: 2018-12-25 16:10 GMT
ಬೆಂಗಳೂರು, ಡಿ.25: ಆ್ಯಂಬಿಡೆಂಟ್ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಹಣದ ಮೂಲದ ಬಗ್ಗೆ ಬಿಚ್ಚಿಟ್ಟ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ತನಿಖೆ ಶುರು ಮಾಡಿದ್ದಾರೆ ಎನ್ನಲಾಗಿದೆ.
ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಫರೀದ್, ಹಣವನ್ನು ಬೇರೆಯವರ ಬ್ಯಾಂಕ್ ಖಾತೆಗೆ ಹಾಕಿದ್ದು, ಇದರ ಅನ್ವಯ ಸಿಸಿಬಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸದ್ಯ ಯಾರ ಯಾರ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇತ್ತು ಎಂಬುದನ್ನು ಹುಡುಕಲು ಸಿಸಿಬಿ ಪೊಲೀಸರು ಬೆನ್ನತ್ತಿದ್ದಾರೆ ಎನ್ನಲಾಗಿದ್ದು, ಕೆಲ ಪ್ರತಿಷ್ಠಿತ ಉದ್ಯಮಿ ಹಾಗೂ ರಾಜಕಾರಣಿಗಳ ಖಾತೆಯಲ್ಲಿಯೂ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆ ಪ್ರತಿಯೊಬ್ಬರ ಬ್ಯಾಂಕ್ ಖಾತೆ ಹಾಗೂ ವ್ಯಕ್ತಿಗಳ ಬಗ್ಗೆ ಮಾಹಿತಿಯನ್ನ ಸಿಸಿಬಿ ಪೊಲೀಸರು ಕಲೆ ಹಾಕುತ್ತಿದ್ದಾರೆ. ಈಗಾಗಲೇ ಸಿಸಿಬಿ ಪೊಲೀಸರು ಮುಂಬೈನಲ್ಲಿ ಮತ್ತೊಬ್ಬ ಆರೋಪಿ ಅನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.