ಸುವರ್ಣ ನ್ಯೂಸ್ ನಿರೂಪಕನ ವಿರುದ್ಧದ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ: ಗೃಹ ಸಚಿವ ಎಂ.ಬಿ.ಪಾಟೀಲ್

Update: 2018-12-31 14:54 GMT

ಬೆಂಗಳೂರು, ಡಿ. 31: ಸುವರ್ಣ ನ್ಯೂಸ್ ನಿರೂಪಕ ಅಜಿತ್ ಹನುಮಕ್ಕನವರ್ ಅವರಿಂದ  ಪ್ರವಾದಿ ನಿಂದನೆ ಆಗಿದೆ ಎಂಬ ಆರೋಪದ ಬಗ್ಗೆ ರಾಜ್ಯಾದ್ಯಂತ ಹಲವಾರು ದೂರುಗಳು ದಾಖಲಾದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆಯೆಂದು ಗೃಹ ಸಚಿವ ಎಂ ಬಿ ಪಾಟೀಲ್ ತಿಳಿಸಿದರು.

ಪ್ರಕರಣದ ಬಗ್ಗೆ ಸಚಿವ ಯು.ಟಿ ಖಾದರ್ ಅವರು ಗೃಹ ಸಚಿವ ಎಂ ಬಿ ಪಾಟೀಲ್ ರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಸಂದರ್ಭದಲ್ಲಿ, ಯಾವುದೇ ಧರ್ಮದವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಖಾದರ್ ಗೃಹ ಸಚಿವರನ್ನು ಕೋರಿದರು.

ಈ ಪ್ರಕರಣದಲ್ಲಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕದಡುವ ಹುನ್ನಾರ ಅಡಗಿರುವಂತೆ ಕಾಣುತ್ತಿದೆ. ಆದ್ದರಿಂದ ಯಾವುದೇ ಧಾರ್ಮಿಕ ನಂಬಿಕೆಗಳ ಬಗ್ಗೆ ಅವಹೇಳನಕಾರಿ ಮಾತಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಖಾದರ್ ವಿನಂತಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News