ಮಂಗನ ಕಾಯಿಲೆ: ಮಣಿಪಾಲದಲ್ಲಿ 41 ಶಂಕಿತರಿಗೆ ಚಿಕಿತ್ಸೆ
Update: 2019-01-07 17:01 GMT
ಮಣಿಪಾಲ, ಜ.7: ಶಿವಮೊಗ್ಗ ಜಿಲ್ಲೆಯ ಸಾಗರ ಹಾಗೂ ಆಸುಪಾಸಿನ ಸುಮಾರು 41 ಶಂಕಿತ ಮಂಗನ ಕಾಯಿಲೆ ಪೀಡಿತರು ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದರಲ್ಲಿ ಸುಮಾರು 6 ಮಂದಿಗೆ ಮಂಗನ ಕಾಯಿಲೆ ಇರುವ ಬಗ್ಗೆ ವರದಿ ಯಾಗಿದೆ. ಮೂರು ಮಂದಿ ಈಗಾಗಲೇ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಪಡೆದು ಬಿಡುಗಡೆ ಹೊಂದಿದ್ದಾರೆ. ಉಳಿದ ಮೂರು ಮಂದಿ ಆಸ್ಪತ್ರೆಯಲ್ಲಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗನ ಕಾಯಿಲೆಯಿಂದ ಮರಣವಾದ ಬಗ್ಗೆ ಯಾವುದೇ ವರದಿಯಾಗಿಲ್ಲ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.