ಜ.19: ತುಳು ಸಾಹಿತ್ಯ ಕಮ್ಮಟ

Update: 2019-01-17 14:54 GMT

ಮಂಗಳೂರು, ಜ.17: ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ವತಿಯಿಂದ ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಸಹಯೋಗದೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ತುಳು ಕತೆ ಕವಿತೆ, ಪತ್ರಲೇಖನ ಬರೆಯುವ ತುಳು ಸಾಹಿತ್ಯ ಕಮ್ಮಟವನ್ನು ಜ.19ರಂದು ಅಪರಾಹ್ನ 1:30ಕ್ಕೆ ಕಾಲೇಜಿನಲ್ಲಿ ನಡೆಯಲಿದೆ.

ಬಂಟ್ವಾಳ ಎಸ್.ವಿ.ಎಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಚೇತನ್ ಮುಂಡಾಜೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುವರು. ಅಪರಾಹ್ನ 3:30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News