ವಿಜ್ಞಾನ ತಂತ್ರಜ್ಞಾನ ಅಕಾಡೆಮಿ ಸಮ್ಮೇಳನ: ಡಾ.ಶ್ರೀಕಂಠನ್‌ಗೆ ಜೀವಮಾನ ಸಾಧನೆ ಪ್ರಶಸ್ತಿ

Update: 2019-01-23 16:52 GMT

ಉಡುಪಿ, ಜ. 23: ಕರ್ನಾಟಕ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಹನ್ನೊಂದನೇ ಪ್ರಧಾನ ಸಮ್ಮೇಳನವನ್ನು ಬೆಂಗಳೂರಿನ ಜಯನಗರದಲ್ಲಿರುವ ಎನ್.ಎಂ.ಕೆ.ಆರ್.ವಿ. ಕಾಲೇಜಿನ ಸಹಯೋಗದೊಂದಿಗೆ ಫೆ.1ಮತ್ತು 2ರಂದು ಆಯೋಜಿಸಲಾಗಿದೆ.

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿರುವ ವಿಜ್ಞಾನಿ ಹಾಗೂ ಮುಂಬೈಯಿನ ಟಾಟಾ ಇನ್‌ಸ್ಟಿಟ್ಯೂಟ್ ಆಪ್ ಫಂಡಮೆಂಟಲ್ ರಿಸರ್ಚ್ ಸೆಂಟರ್‌ನ ನಿವೃತ್ತ ನಿರ್ದೇಶಕ ಪದ್ಮಭೂಷಣ ಪುರಸ್ಕೃತ ಡಾ.ಬಿ.ವಿ. ಶ್ರೀಕಂಠನ್ ಅವರನ್ನು ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ಒಂದು ಲಕ್ಷ ರೂ.ನಗದು, 50,000 ರೂ. ಮೌಲ್ಯದ ಚಿನ್ನದ ಪದಕ ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಎಂ. ರಮೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News