ಈಶ್ವರಪ್ಪ ಆಪ್ತ ಸಹಾಯಕನ ಅಪಹರಣ ಪ್ರಕರಣ ಸಿಸಿಬಿಗೆ ವರ್ಗಾವಣೆ

Update: 2019-01-28 17:52 GMT

ಬೆಂಗಳೂರು, ಜ.28: ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಆಪ್ತ ಸಹಾಯಕ ಎನ್ನಲಾದ ವಿನಯ್ ಅಪಹರಣ ಪ್ರಯತ್ನ ಪ್ರಕರಣದ ತನಿಖೆ ಸಿಸಿಬಿಗೆ ವರ್ಗಾವಣೆಯಾಗಿದೆ.

ವಿನಯ್ ಅಪಹರಣ ಪ್ರಕರಣದ ಹಿಂದೆ ಬಿ.ಎಸ್.ಯಡಿಯೂರಪ್ಪ ಆಪ್ತ ಸಹಾಯಕ ಸಂತೋಷ್ ಕೈವಾಡವಿರುವುದು ತನಿಖೆಯಲ್ಲಿ ಬಯಲಾಗಿತ್ತು. ನಂತರ ಪೊಲೀಸರು ತನಿಖೆಗೆ ಹಾಜರಾಗುವಂತೆ ಸಂತೋಷ್‌ಗೆ ನೋಟಿಸ್ ನೀಡಿದ್ದರು ಎನ್ನಲಾಗಿದೆ.

ಆದರೆ, ಸಂತೋಷ್ ವಿಚಾರಣೆ ವೇಳೆ ಪೊಲೀಸರಿಗೆ ಮೊಬೈಲ್ ನೀಡದೇ ವಿಚಾರಣೆಗೆ ಸಹಕರಿಸಿರಲಿಲ್ಲ. ಅಲ್ಲದೇ ಯಡಿಯೂರಪ್ಪ ಮನೆಯಲ್ಲೇ ಸಂತೋಷ್ ಆಶ್ರಯ ಪಡೆದಿದ್ದರು ಎನ್ನಲಾಗಿದೆ. ಈ ಕುರಿತು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಲಾಗಿತ್ತು. ಆದರೆ, ಯಡಿಯೂರಪ್ಪ ವಿಚಾರಣೆಗೆ ಹಾಜರಾಗಲಿಲ್ಲ. ಈ ಹಿನ್ನೆಲೆ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸುವಂತೆ ವಿನಯ್ ನಗರ ಪೊಲೀಸ್ ಆಯುಕ್ತರಿಗೆ ಕೋರಿದ್ದರು. ಇದರ ಅನ್ವಯ ಸಿಸಿಬಿ ಮರು ತನಿಖೆ ನಡೆಸುವಂತೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಏನಿದು ಪ್ರಕರಣ?: 2017ರ ಮೇ.11 ರಂದು ಇಸ್ಕಾನ್ ದೇವಾಲಯದ ಬಳಿ 8 ಮಂದಿಯ ತಂಡವೊಂದು ವಿನಯ್ ಅನ್ನು ಕಿಡ್ನಾಪ್ ಮಾಡಲು ಪ್ರಯತ್ನಿಸಿತ್ತು. ಈ ಸಂಬಂಧ ಅದೇ ದಿನ ವಿನಯ್ ಮಹಾಲಕ್ಷೀ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News