ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ ಸೇರಿದ ಶಂಕರ್‌ಸಿನ್ಹ ವೇಲ

Update: 2019-01-29 17:31 GMT

ಅಹಮದಾಬಾದ್,ಜ.29: ಗುಜರಾತ್ ಮಾಜಿ ಮುಖ್ಯಮಂತ್ರಿ ಶಂಕರ್‌ಸಿನ್ಹ ವೇಲ ಮಂಗಳವಾರ ಅಹಮದಾಬಾದ್‌ನಲ್ಲಿ ಶರದ್ ಪವಾರ್ ಅವರ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ.

1996ರಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ 78ರ ಹರೆಯದ ವೇಲ 2017ರ ಗುಜರಾತ್ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್‌ನಿಂದ ಹೊರಬಂದಿದ್ದರು. ಬಿಜೆಪಿ ಮರಳದ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗಳಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದರು. ಎನ್‌ಸಿಪಿ ಮಂಗಳವಾರ ಸೇರ್ಪಡೆಗೊಳ್ಳುವ ಸಮಯದಲ್ಲಿ ನರೇಂದ್ರ ಮೋದಿ ಸರಕಾರ ಕ್ರೂರ ಮತ್ತು ಭ್ರಷ್ಟ ಎಂದು ಕಿಡಿಕಾರಿದ್ದಾರೆ.

ಭಾರತದಲ್ಲಿ ಬಿಜೆಪಿ ಆಡಳಿತದಡಿಯಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿರುವ ಈ ಸಮಯದಲ್ಲಿ ನಾನು ಬಿಜೆಪಿ ವಿರುದ್ಧ ಹೋರಾಡಲು ಮತ್ತು ಬಿಜೆಪಿ ವಿರೋಧಿ ಶಕ್ತಿಗಳ ಕೈಯನ್ನು ಬಲಪಡಿಸುವ ಉದ್ದೇಶದಿಂದ ಎನ್‌ಸಿಪಿ ಸೇರ್ಪಡೆಗೊಂಡಿದ್ದೇನೆ ಎಂದು ವೇಲ ತಿಳಿಸಿದ್ದಾರೆ. ಕಳೆದ ಅಕ್ಟೋಬರ್‌ನಲ್ಲಿ ವೇಲಾರ ಪುತ್ರ ಮಹೇಂದ್ರಸಿನ್ಹ ವೇಲಾ ವೈಯಕ್ತಿಕ ಕಾರಣಗಳನ್ನು ನೀಡಿ ಬಿಜೆಪಿ ತೊರೆದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News