ರಾಮಗಢ ವಿಧಾನಸಭಾ ಉಪ ಚುನಾವಣೆ: ಕಾಂಗ್ರೆಸ್ ಜಯಭೇರಿ

Update: 2019-01-31 06:45 GMT

ಜೈಪುರ, ಜ.31: ರಾಜಸ್ಥಾನದ ರಾಮಗಡ ವಿಧಾನಸಭೆಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಭ್ಯರ್ಥಿ ಶಾಫಿಯಾ ಝುಬೈರ್ 12,228 ಮತಗಳ ಅಂತರದಿಂದ ಜಯ ದಾಖಲಿಸಿದ್ದಾರೆ. ಈ ಗೆಲುವಿನೊಂದಿಗೆ 200 ಸದಸ್ಯರ ರಾಜಸ್ಥಾನ ವಿಧಾನಸಭೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ 100 ಸ್ಥಾನಗಳನ್ನು ಪಡೆದಂತಾಗಿದೆ.

ರಾಮಗಢ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಬಿಎಸ್ಪಿ ಅಭ್ಯರ್ಥಿ ಲಕ್ಷ್ಮಣ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಡಿ.7 ರಂದು ನಿಗದಿಯಾಗಿದ್ದ ವಿಧಾನಸಭಾ ಚುನಾವಣೆ ಮುಂದೂಡಲ್ಪಟ್ಟಿತ್ತು.

ರಾಮಗಢ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಬಿಎಸ್ಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಸುಮಾರು 20 ಅಭ್ಯರ್ಥಿಗಳು ಕಣದಲ್ಲಿದ್ದರು. ಬಿಎಸ್ಪಿ ಪಕ್ಷ ಮಾಜಿ ಕಾಂಗ್ರೆಸ್ ನಾಯಕ ನಟವರ್ ಸಿಂಗ್ ಪುತ್ರ ಜಗತ್ ಸಿಂಗ್‌ರನ್ನು ಕಣಕ್ಕಿಳಿಸಿತ್ತು. ಬಿಜೆಪಿ ಪಕ್ಷ ಸುಖ್ವಂತ್ ಸಿಂಗ್‌ರನ್ನು ತನ್ನ ಅಭ್ಯರ್ಥಿಯನ್ನಾಗಿತ್ತು. ಸೋಮವಾರ ನಡೆದ ಉಪ ಚುನಾವಣೆಯಲ್ಲಿ 78.45 ಶೇ. ಮತದಾನವಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News