ಅಕ್ರಮ ಹಣ ವರ್ಗಾವಣೆ ಪ್ರಕರಣ: ಸಮನ್ಸ್ ಜಾರಿ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಡಿಕೆಶಿ ಆಪ್ತ ಸಚಿನ್ ನಾರಾಯಣ್

Update: 2019-01-31 15:38 GMT

ಬೆಂಗಳೂರು, ಜ.31: ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ ಜಾರಿಗೊಳಿಸಿರುವ ಸಮನ್ಸ್ ಪ್ರಶ್ನಿಸಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಆಪ್ತ ಸಚಿನ್ ನಾರಾಯಣ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಜಾರಿ ನಿರ್ದೇಶನಾಲಯವು 2019ರ ಜ.17ರಂದು ಜಾರಿ ಮಾಡಿದ್ದ ಸಮನ್ಸ್ ರದ್ದುಪಡಿಸಲು ಅರ್ಜಿಯಲ್ಲಿ ಸಚಿನ್ ನಾರಾಯಣ್ ಕೋರಿದ್ದಾರೆ. ಅರ್ಜಿಯಲ್ಲಿ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯವನ್ನು ಪ್ರತಿವಾದಿ ಮಾಡಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಇದೇ ತೆರಿಗೆ ವಂಚನೆ ಹಾಗೂ ಹಣ ಅಕ್ರಮ ಸಂಗ್ರಹಣೆ ಪ್ರಕರಣ ಸಂಬಂಧ ಸಚಿನ್ ನಾರಾಯಣ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಆದಾಯ ತೆರಿಗೆ ಇಲಾಖೆ ಪ್ರಧಾನ ನಿರ್ದೇಶಕರು ನೀಡಿದ್ದ ಪೂರ್ವಾನುಮತಿ ಮತ್ತು ವಿಶೇಷ ನ್ಯಾಯಾಲಯ ಜಾರಿಗೊಳಿಸಿದ್ದ ಸಮನ್ಸ್‌ಗೆ ಹೈಕೋರ್ಟ್ ಈ ಹಿಂದೆಯೇ ತಡೆಯಾಜ್ಞೆ ನೀಡಿತ್ತು.

ಈ ಮಧ್ಯೆ ಆದಾಯ ತೆರಿಗೆ ಇಲಾಖೆ ದಾಖಲಿಸಿದ್ದ ದೂರು ಆಧರಿಸಿ ಜಾರಿ ನಿರ್ದೇಶನಾಲಯವು ಸಚಿನ್ ನಾರಾಯಣ್‌ಗೆ ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗಲು ಸೂಚಿಸಿತ್ತು. ಇದೇ ಪ್ರಕರಣದಲ್ಲಿ ಜಲಸಂಪನ್ಮೂಲ ಸಚಿವ ಸಹ ಆರೋಪಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News