ಪತ್ನಿಗೆ ಅಶ್ಲೀಲ ವಿಡಿಯೋ ತೋರಿಸಿ ಕಿರುಕುಳ ನೀಡಿದ ಆರೋಪ: ಶಿಕ್ಷಕನ ವಿರುದ್ಧ ದೂರು ದಾಖಲು

Update: 2019-02-09 17:06 GMT

ಬೆಂಗಳೂರು, ಫೆ.9: ಪತ್ನಿಗೆ ಅಶ್ಲೀಲ ವಿಡಿಯೋ ತೋರಿಸಿ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪ ಕೇಳಿಬಂದಿದ್ದು, ಇಲ್ಲಿನ ನೆಲಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ಉಜಿನಿ ಸರಕಾರಿ ಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ವಸಂತ್ ಎಂಬಾತ ತನ್ನ ಪತ್ನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಿ ಪತ್ನಿ ನೆಲಮಂಗಲ ಪಟ್ಟಣ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

'ನಾವಿಬ್ಬರು ಪ್ರೀತಿಸಿದ್ದೆವು. ಬಳಿಕ ಕುಟುಂಬದವರು ಒಪ್ಪಿ ಮದುವೆ ಮಾಡಿದರು. ಮದುವೆ ನಂತರ ಇಬ್ಬರು ಕೆಲಸಕ್ಕೆ ಹೋಗುತ್ತಿದ್ದೆವು. ಮಕ್ಕಳಾದ ಮೇಲೆ ನಾನು ಕೆಲಸಕ್ಕೆ ಹೋಗಿಲ್ಲ. ಹೀಗಾಗಿ, ಮನೆಯ ಜವಾಬ್ದಾರಿ ಅವರ ಮೇಲೆ ಬಿತ್ತು. ಮದುವೆ ಸಮಯದಲ್ಲಿ ಹಣ, ಚಿನ್ನಾಭರಣ ನೀಡಿದ್ದೆವು. ಆದರೆ ಇತ್ತೀಚೆಗೆ ಮನೆಗೆ ಸಾಮಗ್ರಿಗಳನ್ನು ತಂದು ಕೊಡುತ್ತಿರಲಿಲ್ಲ. ಈ ಬಗ್ಗೆ ಪ್ರಶ್ನೆ ಮಾಡಿದರೆ, ಹಲ್ಲೆ ಮಾಡುತ್ತಿದ್ದರು. ಅಷ್ಟೇ ಅಲ್ಲದೇ, ಮನೆಯಲ್ಲಿಯೇ ನೀಲಿ ಚಿತ್ರ ನೋಡಿ ಅದೇ ರೀತಿ ನಡೆಯಬೇಕು ಎಂದು ಕಿರುಕುಳ ನೀಡುತ್ತಿದ್ದರು. ಹೀಗಾಗಿಯೇ ದೂರು ನೀಡಿದ್ದೇನೆ' ಎಂದು ಪತ್ನಿ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕ್ಷುಲ್ಲಕ ವಿಚಾರಕ್ಕೆ ಪತ್ನಿ ಮೇಲೆ ಹಲ್ಲೆ ಮಾಡಿದ್ದಾರೆನ್ನಲಾಗಿದ್ದು, ಸದ್ಯ ಪತ್ನಿ ನೆಲಮಂಗಲ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ಸಂಬಂಧ ನೆಲಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News