ಪಂಜಾಬ್, ಖೈಬರ್ ಪಖ್ತೂಂಖ್ವ ರಾಜ್ಯಗಳ ವಿಮಾನ ನಿಲ್ದಾಣಗಳು ಬಂದ್

Update: 2019-02-27 15:11 GMT

ಲಾಹೋರ್, ಫೆ. 27: ಭಾರತ ಮತ್ತು ಪಾಕಿಸ್ತಾನಗಳ ನಡುವಿನ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಪಾಕಿಸ್ತಾನದ ಪಂಜಾಬ್ ಮತ್ತು ಖೈಬರ್ ಪಖ್ತೂಂಖ್ವ ರಾಜ್ಯಗಳಲ್ಲಿರುವ ಪ್ರಮುಖ ವಿಮಾನ ನಿಲ್ದಾಣಗಳನ್ನು ಬುಧವಾರ ಮುಚ್ಚಲಾಗಿದೆ ಎಂದು ಮಾಧ್ಯಮ ವರದಿಯೊಂದು ತಿಳಿಸಿದೆ.

ಭಾರತ ಮತ್ತು ಪಾಕಿಸ್ತಾನಗಳ ವಾಯುಪಡೆಗಳ ನಡುವೆ ಬುಧವಾರ ಘರ್ಷಣೆ ನಡೆದ ಹಿನ್ನೆಲೆಯಲ್ಲಿ ಪಾಕಿಸ್ತಾನದ ಅಧಿಕಾರಿಗಳು ಈ ಕ್ರಮ ತೆಗೆದುಕೊಂಡಿದ್ದಾರೆ.

ಲಾಹೋರ್, ಮುಲ್ತಾನ್, ಫೈಸಲಾಬಾದ್, ಸಿಯಾಲ್‌ಕೋಟ್ ಮತ್ತು ಇಸ್ಲಾಮಾಬಾದ್ ವಿಮಾನ ನಿಲ್ದಾಣಗಳಲ್ಲಿನ ಎಲ್ಲ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಲಾಹೋರ್ ವಿಮಾನ ನಿಲ್ದಾಣದ ನಿರ್ವಾಹಕ ಹೇಳಿದ್ದಾರೆ ‘ಜಿಯೋ ನ್ಯೂಸ್’ ವರದಿ ಮಾಡಿದೆ.

ಎಲ್ಲ ಒಳಬರುವ ಮತ್ತು ಹೊರಹೋಗುವ ಸ್ಥಳೀಯ ಮತ್ತು ಅಂತರ್‌ರಾಷ್ಟ್ರೀಯ ವಿಮಾನಗಳನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News