ಬಿಜೆಪಿ ಬೆಂಬಲಿತ ಅಭ್ಯರ್ಥಿಯನ್ನು ಬೆಂಬಲಿಸಿದರೆ ಸಹಿಸಲು ಸಾಧ್ಯವಿಲ್ಲ: ಕೆ.ಸಿ.ವೇಣುಗೋಪಾಲ್

Update: 2019-03-30 13:24 GMT

ಬೆಂಗಳೂರು, ಮಾ. 30: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವ ಉದ್ದೇಶದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಬೆಂಬಲಿಸಿದರೆ ಸಹಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಂಡ್ಯ ಕ್ಷೇತ್ರದಲ್ಲಿ ಕೆಲ ಮುಖಂಡರು ಪರೋಕ್ಷವಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಬೆಂಬಲ ನೀಡುತ್ತಿದ್ದಾರೆಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಕಾರಣಕ್ಕೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಾಗಿದೆ. ನಮ್ಮ ಪಕ್ಷದವರೆ ಹೀಗೆ ಮಾಡಿದರೆ ಸರಿಯಲ್ಲ. ಹೀಗಾದರೆ ಜೆಡಿಎಸ್ ಕಾರ್ಯಕರ್ತರು ನಮ್ಮ ಪಕ್ಷದ ಅಭ್ಯರ್ಥಿಗಳ ಪರ ಕೆಲಸ ಮಾಡಲು ಕಷ್ಟವಾಗುತ್ತದೆ ಎಂದು ಹೇಳಿದರು.

ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪರ ಕೆಲಸ ಮಾಡಿದರೆ ನೋಡಿಕೊಂಡು ಸುಮ್ಮನೆ ಇರಲು ಸಾಧ್ಯವಿಲ್ಲ. ಇದು ಬೇರೆ ಕ್ಷೇತ್ರಗಳ ಮೇಲೆಯೂ ಪರಿಣಾಮ ಬೀರಲಿದೆ. ಆದುದರಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಸೂಚಿಸಲಾಗಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News