‘1512 ಫ್ಲೈಯಿಂಗ್ ಸ್ಕ್ವಾಡ್ಸ್-1837 ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳು ಸಕ್ರಿಯ’

Update: 2019-03-31 18:21 GMT

ಬೆಂಗಳೂರು, ಮಾ.31: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 1512 ಫ್ಲೈಯಿಂಗ್ ಸ್ಕ್ವಾಡ್ಸ್ ಮತ್ತು 1837 ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. 320 ಅಬಕಾರಿ ತಂಡಗಳು ಹಾಗೂ 180 ವಾಣಿಜ್ಯ ತೆರಿಗೆ ತಂಡಗಳು ಕಾರ್ಯನಿರ್ವಹಿಸುತ್ತಿವೆ ಎಂದು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಫ್ಲೈಯಿಂಗ್ ಸ್ಕಾಡ್ಸ್‌ಗಳು, ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳು ಹಾಗೂ ಪೊಲೀಸ್ ಪ್ರಾಧಿಕಾರಿಗಳು 6.21 ಕೋಟಿ ರೂ.ನಗದು, 32.17 ಲಕ್ಷ ರೂ.ಮೌಲ್ಯದ 5058.156 ಲೀಟರ್ ಮದ್ಯ ಹಾಗೂ 6.05 ಲಕ್ಷ ರೂ.ಮೌಲ್ಯದ 131.59 ಕೆಜಿ ಮಾದಕ ದ್ರವ್ಯಗಳನ್ನು ಹಾಗೂ 76.25 ಲಕ್ಷ ರೂ.ವೌಲ್ಯದ ಇತರೆ ಬೆಲೆ ಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

819 ಪ್ರಥಮ ಮಾಹಿತಿ ವರದಿ(ಎಫ್‌ಐಆರ್)ಗಳನ್ನು ಈವರೆಗೆ ದಾಖಲಿಸಿವೆ. ಆದಾಯ ತೆರಿಗೆ ಇಲಾಖೆಯು 4.93 ಕೋಟಿ ರೂ.ನಗದು ಮತ್ತು 1.68 ಕೋಟಿ ರೂ.ಮೌಲ್ಯದ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದೆ.

ಅಬಕಾರಿ ಇಲಾಖೆಯು 30.06 ಕೋಟಿ ರೂ.ವೌಲ್ಯದ 6.72 ಲಕ್ಷ ಲೀಟರ್‌ಗಳಷ್ಟು ಮದ್ಯ, 4.05 ಲಕ್ಷ ರೂ.ವೌಲ್ಯದ 12.682 ಕೆಜಿ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡು, 1591 ಗಂಭೀರ ಪ್ರಕರಣಗಳನ್ನು ದಾಖಲಿಸಿದೆ ಹಾಗೂ ಮದ್ಯದ ಪರವಾನಿಗೆಯನ್ನು ಉಲ್ಲಂಘಿಸಿದ 1892 ಪ್ರಕರಣಗಳು, 3 ಎನ್‌ಡಿಪಿಎಸ್ ಮತ್ತು ಕರ್ನಾಟಕ ಅಬಕಾರಿ ಕಾಯ್ದೆ 1965ರ ಪರಿಚ್ಛೇದ 15(ಎ) ಅನ್ವಯ 5563 ಪ್ರಕರಣಗಳನ್ನು ದಾಖಲಿಸಿವೆ ಮತ್ತು 820 ವಿವಿಧ ಮಾದರಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಒಟ್ಟಾರೆ 95,317 ಶಸ್ತ್ರಾಸ್ತ್ರಗಳನ್ನು ಜಮೆ ಮಾಡಿಸಿಕೊಳ್ಳಲಾಗಿದೆ. 8 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 6 ಶಸ್ತ್ರಾಸ್ತ್ರ ಪರವಾನಿಗೆಯನ್ನು ರದ್ದು ಪಡಿಸಲಾಗಿದೆ. ಸಿಆರ್‌ಪಿಸಿ ಕಾಯ್ದೆಯಡಿ 42,908 ಪ್ರಕರಣಗಳನ್ನು ದಾಖಲಿಸಲಾಗಿದೆ. ಅವುಗಳಲ್ಲಿ 40,937 ವ್ಯಕ್ತಿಗಳಿಂದ ಮುಚ್ಚಳಿಕೆಯನ್ನು ಪಡೆಯಲಾಗಿದೆ. 32,127 ಜಾಮೀನು ರಹಿತ ವಾರೆಂಟ್‌ಗಳನ್ನು ಚುನಾವಣೆ ಘೋಷಣೆಯಾದ ದಿನಾಂಕದಿಂದ ಈವರೆಗೆ ಜಾರಿಗೊಳಿಸಲಾಗಿದೆ.
ಎಲ್ಲ ತಂಡಗಳು ಒಟ್ಟು 44.05 ಕೋಟಿ ರೂ.ವೌಲ್ಯದ ನಗದು ಸೇರಿದಂತೆ ಇತರೆ ವಸ್ತುಗಳು, ಮದ್ಯ, ಮಾದಕದ್ರವ್ಯ, ಇತ್ಯಾದಿಯನ್ನು ವಶಪಡಿಸಿಕೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News