ಕುಂದಾಪುರಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ

Update: 2019-04-02 16:53 GMT

ಉಡುಪಿ, ಎ.2: ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ಸಂಜೆ ಕುಂದಾಪುರಕ್ಕೆ ಆಗಮಿಸಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪರ ಪರವಾಗಿ ಜಂಟಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಶಿವಮೊಗ್ಹದಿಂದ ಹೆಲಿಕಾಫ್ಟರ್‌ನಲ್ಲಿ ಕುಂದಾಪುರಕ್ಕೆ ಆಗಮಿಸುವ ಕುಮಾರಸ್ವಾಮಿ ಅವರು ಸಂಜೆ 5:30ಕ್ಕೆ ಕಾಂಗ್ರೆಸ್-ಜೆಡಿಎಸ್ ಜಂಟಿ ಚುನಾವಣಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ ಸೇರಿದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಹಿರಿಯ ನಾಯಕರುಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು ಹಾಗೂ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಯೋಗೇಶ್ ಶೆಟ್ಟಿ ಕಾಪು ಅವರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕುಂದಾಪುರದ ಕಾರ್ಯಕ್ರಮವನ್ನು ಮುಗಿಸಿ ಗೋರ್ಕಣಕ್ಕೆ ತೆರಳುವ ಕುಮಾರಸ್ವಾಮಿ ಅವರು ರಾತ್ರಿ ಅಲ್ಲೇ ವಾಸ್ತವ್ಯ ಮಾಡುವರು. ಮರುದಿನ ಅವರು ಕಾರವಾರಕ್ಕೆ ತೆರಳುವ ಕಾರ್ಯಕ್ರಮವಿದೆ. ಎ.4 ಮತ್ತು 5ರ ಅವರ ಉಡುಪಿ ಕಾರ್ಯಕ್ರಮ ರದ್ದಾಗಿದೆ ಎಂದು ಯೋಗೇಶ್ ಶೆಟ್ಟಿ ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News