ಮಾಜಿ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಬಿಜೆಪಿ ಸೇರ್ಪಡೆ

Update: 2019-04-03 11:16 GMT

ಬೆಂಗಳೂರು, ಎ.3: ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಕೆ. ರತ್ನಪ್ರಭಾ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಕಲ್ಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿಶೇಷ ರೀತಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಅಭಿವೃದ್ಧಿ ಮಾಡುತ್ತಿರುವ ಹಿನ್ನೆಲೆಯಲ್ಲಿ ನಾನು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದೇನೆ. ದೇಶಕ್ಕಾಗಿ ನಾನು ಸೇವೆ ಸಲ್ಲಿಸಲು ಬಯಸಿದ್ದೇನೆ” ಎಂದವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News