22 ವರ್ಷ ಹಿಂದಿನ ಕೊಲೆ ಪ್ರಕರಣ: ಬಿಜೆಪಿ ಶಾಸಕನಿಗೆ ಜೀವಾವಧಿ ಶಿಕ್ಷೆ
Update: 2019-04-19 15:25 GMT
ಲಕ್ನೊ, ಎ.19: 22 ವರ್ಷದ ಹಿಂದಿನ ಕೊಲೆ ಪ್ರಕರಣವೊಂದರಲ್ಲಿ ಉತ್ತರಪ್ರದೇಶದ ಹಾಮಿರ್‌ಪುರ ಜಿಲ್ಲೆಯ ಬಿಜೆಪಿ ಶಾಸಕ ಅಶೋಕ್ ಚಾಂಡೆಲ್‌ಗೆ ಜೀವಾವಧಿ ಶಿಕ್ಷೆ ಘೋಷಿಸಲಾಗಿದೆ.
1997ರ ಜನವರಿ 26ರಂದು ನಡೆದ ಐದು ಮಂದಿಯ ಕೊಲೆ ಪ್ರಕರಣದಲ್ಲಿ ಶಾಮೀಲಾಗಿರುವ ಹಿನ್ನೆಲೆಯಲ್ಲಿ ಅಲಹಾಬಾದ್ ಹೈಕೋರ್ಟ್ ಚಾಂಡೇಲ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ನ್ಯಾಯಾಧೀಶರಾದ ರಮೇಶ್ ಸಿನ್ಹ ಮತ್ತು ಡಿಕೆ ಸಿಂಗ್ ಅವರಿದ್ದ ನ್ಯಾಯಪೀಠವು ಇತರ 10 ಮಂದಿಗೂ ಜೀವಾವಧಿ ಶಿಕ್ಷೆ ವಿಧಿಸಿದೆ. ಕೆಳ ನ್ಯಾಯಾಲಯವು ಆರೋಪಿಗಳನ್ನು ದೋಷಮುಕ್ತಿಗೊಳಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು.