ಬಸ್ ನಿಲ್ದಾಣಗಳಲ್ಲಿ ಮುಂಜಾಗ್ರತ ಭದ್ರತಾ ಕ್ರಮ: ಶಿವಯೋಗಿ ಕಳಸದ

Update: 2019-04-27 17:07 GMT

ಬೆಂಗಳೂರು, ಎ.27: ನಿಗಮದ ಎಲ್ಲ ಬಸ್ ನಿಲ್ದಾಣಗಳಲ್ಲಿ ಹೆಚ್ಚಿನ ತಪಾಸಣಾ ಹಾಗೂ ಮುನ್ನೆಚ್ಚರಿಕೆ ಕ್ರಮ ವಹಿಸಲು ವಿಭಾಗೀಯ ನಿಯಂತ್ರಣಾಧಿಕಾರಿಗಳು ಹಾಗೂ ಭದ್ರತಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ತಿಳಿಸಿದ್ದಾರೆ.

ಬಸ್ ನಿಲ್ದಾಣಗಳಲ್ಲಿ ಕಂಡು ಬರುವ ಅನುಮಾನಸ್ಪದ ವಸ್ತುಗಳು ಮತ್ತು ವಾರಸುದಾರರಿಲ್ಲದ ಲಗ್ಗೇಜುಗಳ ಬಗ್ಗೆ ಹೆಚ್ಚಿನ ಒತ್ತು ನೀಡಿ ಗಮನಹರಿಸುವುದು. ಪ್ರತಿ ಗಂಟೆಗೊಮ್ಮೆ ಎಲ್ಲ ವಿಭಾಗೀಯ ನಿಯಂತ್ರಣಾಧಿಕಾರಿಗಳು ಕೇಂದ್ರ ಕಚೇರಿಯ ನಿಯಂತ್ರಣಾ ಕೊಠಡಿಗೆ ಮಾಹಿತಿಯನ್ನು ರವಾನಿಸುತ್ತಿರಬೇಕು ಎಂದು ಅವರು ಹೇಳಿದ್ದಾರೆ.

24/7 ಕೇಂದ್ರ ಕಚೇರಿಯ ನಿಯಂತ್ರಣಾ ಕೊಠಡಿಯು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿರಬೇಕು. ನಿಗಮದ ಬಸ್ ನಿಲ್ದಾಣಗಳಲ್ಲಿ ಯಾವುದೇ ರೀತಿಯ ಅನುಮಾನಸ್ಪದ ವ್ಯಕ್ತಿ, ವಾರಸುದಾರರಿಲ್ಲದ ವಸ್ತುಗಳು ಹಾಗೂ ಇನ್ನಾವುದೇ ಅಹಿತಕರ ಘಟನೆಗಳು ಗಮನಕ್ಕೆ ಬಂದಲ್ಲಿ, ಕೂಡಲೇ ಸಾರ್ವಜನಿಕ ಪ್ರಯಾಣಿಕರು ಸಂಬಂಧಪಟ್ಟ ವಿಭಾಗೀಯ ನಿಯಂತ್ರಣಾಧಿಕಾರಿ, ಘಟಕ ವ್ಯವಸ್ಥಾಪಕರು, ಬಸ್ ನಿಲ್ದಾಣ ನಿಯಂತ್ರಕರು ಅಥವಾ ಹತ್ತಿರದ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News