ಅನುಪಮಾ ಶೆಣೈ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲು ಪಿಎಫ್ಐ ಒತ್ತಾಯ

Update: 2019-04-29 17:12 GMT
ನಾಸಿರ್ ಪಾಷಾ

ಬೆಂಗಳೂರು: ಭಯೋತ್ಪಾದನೆ ಕೃತ್ಯವನ್ನು ಸಮರ್ಥಿಸುವ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಮಾಜಿ ಪೊಲೀಸ್ ಅಧಿಕಾರಿಣಿ ಅನುಪಮಾ ಶೆಣೈ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಕ್ರಮ ಜರುಗಿಸಬೇಕು ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಪ್ರಧಾನ  ಕಾರ್ಯದರ್ಶಿ ನಾಸಿರ್ ಪಾಷಾ ಒತ್ತಾಯಿಸಿದ್ದಾರೆ.

ಪೊಲೀಸ್ ಇಲಾಖೆಯ ಗೌರವಾನ್ವಿತ ಹುದ್ದೆಯಲ್ಲಿ ಈ ಹಿಂದೆ ಕಾರ್ಯನಿರ್ವಹಿಸಿದ್ದ ಅನುಪಮಾ ಶೆಣೈಯವರಿಗೆ ಸಂವಿಧಾನ ಮತ್ತು ಕಾನೂನು ವ್ಯವಸ್ಥೆಯ ಬಗ್ಗೆ ಸಮಗ್ರ ಮಾಹಿತಿ ಇದ್ದಾಗ್ಯೂ ಬಹಿರಂಗವಾಗಿ ಈ ರೀತಿಯ ಆತಂಕಕಾರಿ ಹೇಳಿಕೆಯನ್ನು ನೀಡಿರುವುದನ್ನು ಸರಕಾರ ಮತ್ತು ಪೊಲೀಸ್ ಇಲಾಖೆಯು ಗಂಭೀರ ವಾಗಿ ಪರಿಗಣಿಸಬೇಕು. ಇಂತಹ ಹೇಳಿಕೆಯು ಭಯೋತ್ಪಾದನಾ ಕೃತ್ಯಗಳಿಗೆ ಪ್ರಚೋದನೆ ನೀಡುವಂತಿದ್ದು,  ಕಠಿಣ ಕ್ರಮ ತೆಗೆದುಕೊಳ್ಳುವ ಮೂಲಕ ಭಯೋತ್ಪಾದನೆಯನ್ನು ಬೇರು ಸಹಿತ ಹತ್ತಿಕ್ಕಬೇಕು ಎಂದು ನಾಸಿರ್ ಪಾಷಾ  ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News