ಮೇ 8: ಮೊರಾರ್ಜಿ ವಸತಿ ಶಾಲಾ ಪ್ರವೇಶಾತಿ ಕೌನ್ಸಿಲಿಂಗ್
Update: 2019-05-03 15:21 GMT
ಮಂಗಳೂರು, ಮೇ 3: ದ.ಕ. ಜಿಲ್ಲೆಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಂಗಳೂರು ತಾಲೂಕಿನ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಜಿಲ್ಲಾ ಮಟ್ಟದ ಕೌನ್ಸಿಲಿಂಗ್ ಪ್ರಕ್ರಿಯೆಯು ಮೇ 8ರಂದು ಪೂರ್ವಾಹ್ನ 8:30ಕ್ಕೆ ಜಿಪಂನ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.
ಕಮ್ಮಾಜೆ, ಕಲ್ಲಬೆಟ್ಟು, ಗುರುಪುರ, ನೀರುಮಾರ್ಗ ಬೆಳ್ತಂಗಡಿ ತಾಲೂಕಿನ ಮಚ್ಚಿನ, ಮುಂಡಾಜೆ, ಹೊಸಂಗಡಿ ಬಂಟ್ವಾಳ ತಾಲೂಕಿನ ವಗ್ಗ, ಪುತ್ತೂರು ತಾಲೂಕಿನ ಬಲ್ನಾಡು, ಉಪ್ಪಿನಂಗಡಿ ಹಾಗೂ ಸುಳ್ಯ ತಾಲೂಕಿನ ಪಂಜ ಮೊರಾರ್ಜಿ ದೇಸಾಯಿ/ ಡಾ.ಬಿ.ಆರ್.ಅಂಬೇಡ್ಕರ್/ ಇಂದಿರಾಗಾಂಧಿ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಈ ಕೌನ್ಸಿಲಿಂಗ್ ನಡೆಯಲಿದೆ.
ಆಯ್ಕೆಯಾಗಿರುವ ಅಭ್ಯರ್ಥಿಗಳು ಜಾತಿ ಮತ್ತು ಆದಾಯ ಪ್ರಮಾಣಪತ್ರ ಹಾಗೂ ಇತರ ಸೂಕ್ತ ದಾಖಲೆಗಳೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 0824- 2451237 ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.