ಪೊಲೀಸ್ ನಿರೀಕ್ಷಕ ಸುದರ್ಶನ್ ಎಂ.ಗೆ ಬೀಳ್ಕೊಡುಗೆ

Update: 2019-05-03 16:03 GMT

ಉಡುಪಿ, ಮೇ 3: ಪೊಲೀಸ್ ಇಲಾಖೆಯಲ್ಲಿ 34 ವರ್ಷಗಳ ಕಾಲ ಸೇವೆ ಸಲ್ಲಿಸಿ ಎ.30ರಂದು ಸೇವೆಯಿಂದ ನಿವೃತ್ತಿಗೊಂಡ ಪೊಲೀಸ್ ನಿರೀಕ್ಷಕ ಸುದರ್ಶನ್ ಎಂ. ಇವರ ಬೀಳ್ಕೊಡುಗೆ ಸಮಾರಂಭ ಕರಾವಳಿ ಕಾವಲು ಪೊಲೀಸ್ ಕೇಂದ್ರ ಕಚೇರಿಯಲ್ಲಿ ಪೊಲೀಸ್ ಅಧೀಕ್ಷಕ ಪ್ರಮೋದ್ ರಾವ್ ಎನ್.ಟಿ. ಅಧ್ಯಕ್ಷತೆಯಲ್ಲಿ ನಡೆಯಿತು.

ಪ್ರಮೋದ್ ರಾವ್ ಅವರು ನಿವೃತ್ತರನ್ನು ಸನ್ಮಾನಿಸಿ ಮಾತನಾಡಿ, ನಿವೃತ್ತಿ ಎಂಬುದು ಬದುಕಿನ ಅಂತ್ಯವೇನಲ್ಲ. ಸರಕಾರದ ಕಾನೂನಿನಂತೆ 60ಕ್ಕೆ ನಿವೃತ್ತರಾದರೂ ತಮಗೆ ಇಷ್ಟವಾದ ಕಾರ್ಯದಲ್ಲಿ ಪ್ರವೃತ್ತರಾದಾಗ ಬದುಕು ಬಂಗಾರವಾಗುತ್ತದೆ ಎಂದು ಶುಭ ಹಾರೈಸಿದರು. ಉಡುಪಿ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಕಾಶಚಂದ್ರ ಶೆಟ್ಟಿ ಅವರೂ ನಿವೃತ್ತರಿಗೆ ಶುಭ ಹಾರೈಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸುದರ್ಶನ ಎಂ. ಪೊಲೀಸ್ ಇಲಾಖೆಯಲ್ಲಿ ಮನಸ್ಸು ಮತ್ತು ಧೈರ್ಯವಿದ್ದಲ್ಲಿ ಯಶಸ್ಸನ್ನು ಸಾಧಿಸಲು ಸಾಧ್ಯವೆಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸುದರ್ಶನ ಎಂ. ಪೊಲೀಸ್ ಇಲಾಖೆಯಲ್ಲಿ ಮನಸ್ಸು ಮತ್ತು ಧೈರ್ಯವಿದ್ದಲ್ಲಿ ಯಶಸ್ಸನ್ನು ಸಾಧಿಸಲು ಸ್ಯಾವೆಂದರು. ಸಮಾರಂಭದಲ್ಲಿ ಕರಾವಳಿ ಕಾವಲು ಪೊಲೀಸ್ ಕೇಂದ್ರ ಕಛೇರಿಯ ಪೊಲೀಸ್ ಉಪಾಧೀಕ್ಷಕ ಪ್ರವೀಣ್ ಹೆಚ್. ನಾಯಕ್, ಮೈಸೂರು ಹಿರಿಯ ಶ್ರೇಣಿ ನ್ಯಾಯಾಧೀಶ ಸಂತೋಷ್‌ಕುಮಾರ, ಪತ್ನಿ ಪ್ರಮೀಳ, ಉಡುಪಿ ರಾಜ್ಯ ಗುಪ್ತ ವಾರ್ತೆ ಪೊಲೀಸ್ ನಿರೀಕ್ಷಕ ನವೀನ್ ಚಂದ್ರ ಜೋಗಿ ಹಾಗೂ ವಿವಿಧ ಠಾಣೆಗಳ ಪೊಲೀಸ್ ನಿರೀಕ್ಷಕರು, ಕೇಂದ್ರ ಕಛೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕರಾವಳಿ ಕಾವಲು ಪೊಲೀಸ್ ಘಟಕ ಮಲ್ಪೆ ಕೇಂದ್ರ ಕಛೇರಿಯ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ಪಿ. ಸ್ವಾಗತಿಸಿದರು. ಪೊಲೀಸ್ ಉಪ ನಿರೀಕ್ಷಕ ಹಾಗೂ ಪ್ರಭಾರ ನಿರೀಕ್ಷಕ ಬಿ.ಮನಮೋಹನ ರಾವ್ ಕಾರ್ಯಕ್ರಮ ನಿರೂಪಿಸಿದರು. ಕರಾವಳಿ ಕಾವಲು ಪೊಲೀಸ್ ವಾಹನ ವಿಭಾಗದ ಪೊಲೀಸ್ ನಿರೀಕ್ಷಕ ನಾಗರಾಜ್ ಖೇಣಿಕರ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News