ಕುಷ್ಠರೋಗದ ಬಗ್ಗೆ ನಿರಂತರ ಶಿಕ್ಷಣ: ಡಾ.ಕೆ.ಎಂ.ಮುನಿರಾಜ್
ಉಡುಪಿ, ಮೇ 4: ಕುಷ್ಠರೋಗಿಗಳ ಬಗ್ಗೆ ತಾರತಮ್ಯತೆಯನ್ನು ಮಾಡದಂತೆ, ಕುಷ್ಠರೋಗದ ಬಗ್ಗೆ ಆರೋಗ್ಯ ಶಿಕ್ಷಣವನ್ನು ಸಾರ್ವಜನಿಕರಿಗೆ ನಿರಂತರವಾಗಿ ನೀಡುವಂತೆ ಹಾಗೂ ಹೊಸದಾಗಿ ಪತ್ತೆಯಾದ ಎಲ್ಲಾ ಕುಷ್ಠರೋಗಿಗಳಿಗೆ ಸೂಕ್ತ ಚಿಕಿತ್ಸೆಯನ್ನು ನಿಗದಿತ ಅವಧಿಯವರೆಗೆ ನೀಡುವಂತೆ ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ಜಂಟಿ ನಿರ್ದೇಶಕ ಡಾ.ಕೆ.ಎಂ. ಮುನಿರಾಜ್ ಸೂಚನೆಗಳನ್ನು ನೀಡಿದ್ದಾರೆ.
ಉಡುಪಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ಉಡುಪಿ ಜಿಲ್ಲೆಯ ಪ್ಯಾರಾ-ಮೆಡಿಕಲ್ ಸಿಬ್ಬಂದಿಗಳಿಗೆ, ಜಿಲ್ಲೆಯ ವೈದ್ಯಾಧಿಕಾರಿ ಗಳಿಗೆ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳಿಗೆ ರಾಷ್ಟ್ರೀಯ ಕುಷ್ಟರೋಗ ಕಾರ್ಯಕ್ರಮದ ಬಗ್ಗೆ ಪುನರ್ ಮನನ ಮತ್ತು ಪ್ರಗತಿ ಪರಿಶೀಲನಾ ಸಭೆಯನ್ನು ದೆ್ದೀಶಿಸಿ ಅವರು ಮಾತನಾಡುತಿದ್ದರು.
ಜಿಲ್ಲೆಯ ಪ್ರಗತಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆರೋಗ್ಯ ಬಾಧಿತರ ಪರೀಕ್ಷೆ ಹಾಗೂ ಇತರ ಪರೀಕ್ಷೆಗಳನ್ನು ಇನ್ನೂ ಹೆಚ್ಚು ಗುಣಾತ್ಮಕವಾಗಿ ಮಾಡುವಂತಾ ಗಬೇಕು ಎಂದರು. ಕುಷ್ಠರೋಗವನ್ನು ಪ್ರಾಥಮಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಬಗ್ಗೆ ಹಾಗೂ ಅದರಿಂದ ಆಗುವ ಪ್ರಯೋಜನಗಳ ಬಗ್ಗೆ ಹೆಚ್ಚು ಒತ್ತು ನೀಡಿ ವಿವರಿಸಿದರು.
ಜಿಲ್ಲೆಯಲ್ಲಿ ಸಂಶಯಾಸ್ಪದ ಕುಷ್ಠರೋಗಿಗಳನ್ನು ಪತ್ತೆ ಹಚ್ಚುವ ಬಗ್ಗೆ ವಿವರಿಸಿದ ಅವರು, ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ಸಂಶಯಾಸ್ಪದ ಕುಷ್ಟರೋಗಿಗಳ ಮಾಹಿತಿ ಯನ್ನು ಕಾಯ್ದುಕೊಳ್ಳುವಂತೆ ಹಾಗೂ ಪ್ರತೀ ಸಂಸ್ದೆಗಳಲ್ಲಿ ವೈದ್ಯಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಪ್ರತೀ ತಿಂಗಳ ಪ್ರಗತಿ ಪರಿಶೀಲನಾ ಸಬೆಗಳಲ್ಲಿ ಎನ್‌ಎಲ್‌ಇಪಿ ಕಾರ್ಯಕ್ರಮವನ್ನು ವಿವರವಾಗಿ ಪರಿಶೀಲಿಸುವಂತೆ ತಿಳಿಸಿದರು.
ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಡಾ. ಸುರೇಂದ್ರ ಚಿಂಬಾಳ್ಕರ್ ಪಿ. ಸ್ವಾಗತಿಸಿ ವಂದಿಸಿದರು.