ದ.ಕ. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸಂಜೀವ ಮೊಯ್ಲಿ ನಿಧನ
ಮಂಗಳೂರು, ಮೇ 5: ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮೂಡುಬಿದಿರೆ ಸಮೀಪದ ಸಂಜೀವ ಮೊಯ್ಲಿ (69) ರವಿವಾರ ಬೆಳಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿ ಮತ್ತು ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಸಂಜೀವ ಮೊಯ್ಲಿ ಕೆಪಿಸಿಸಿ ಮಾಜಿ ಸದಸ್ಯರಾಗಿ, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.
ಸಂತಾಪ: ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್, ಉಸ್ತುವಾರಿ ಸಚಿವ ಯು.ಟಿ ಖಾದರ್, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ, ಮಾಜಿ ಶಾಸಕರಾದ ಜೆ.ಆರ್. ಲೋಬೋ, ಶಂಕುತಲಾ ಶೆಟ್ಟಿ, ಮೊಯ್ದಿನ್ ಬಾವಾ, ಮುಡಾ ಮಾಜಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಮಾಜಿ ಸಂಸದ ಬಿ. ಇಬ್ರಾಹೀಂ, ತುಳು ಅಕಾಡಮಿಯ ಅಧ್ಯಕ್ಷ ಎ.ಸಿ. ಭಂಡಾರಿ, ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಿ.ಎಚ್.ಖಾದರ್ ಮತ್ತಿತರರು ಸಂತಾಪ ಸೂಚಿಸಿದ್ದಾರೆ.