ಠೇವಣಿದಾರರು ಮೂಲ ದಾಖಲೆ ಸಹಿತ ಅರ್ಜಿ ಸಲ್ಲಿಸಲು ಸೂಚನೆ

Update: 2019-05-06 14:31 GMT

ಉಡುಪಿ, ಮೇ 6: ಮೆ. ಮೈತ್ರಿ ಪ್ಲಾಂಟೇಷನ್ ಮತ್ತು ಹಾರ್ಟಿಕಲ್ಚರ್ ಪ್ರೈವೇಟ್ ಲಿಮಿಟೆಡ್ ಮತ್ತು ಅದರ ಅಂಗ ಸಂಸ್ಥೆಗಳು ಸಾರ್ವಜನಿಕರಿಂದ ವಿವಿಧ ರೀತಿಯ ಠೇವಣಿಗಳನ್ನು ಸಂಗ್ರಹಿಸಿದ್ದು, ಅವುಗಳ ನಿಗದಿತ ಅವಧಿ ಮುಗಿದ ನಂತರ ಅದರ ಹೂಡಿಕೆದಾರರಿಗೆ ಹಿಂದಿರುಗಿಸದೆ ವಂಚಿಸಿರುವುು ಸರಕಾರದ ಗಮನಕ್ಕೆ ಬಂದಿದೆ.

ಈ ವಂಚಿತ ಸಂಸ್ಥೆಯ ಆಸ್ತಿಯನ್ನು ಕರ್ನಾಟಕ ಹಣಕಾಸು ಸಂಸ್ಥೆಗಳು ಠೇವಣಿದಾರರ ಹಿತಸಂರಕ್ಷಣಾ ಕಾಯ್ದೆಯಡಿಯಲ್ಲಿ ಮುಟ್ಟುಗೋಲು ಹಾಕಿ ಕೊಂಡಿದ್ದು, ಹರಾಜು ಪ್ರಕ್ರಿಯೆಗಾಗಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ನ್ಯಾಯಾಲಯದ ಆದೇಶದಂತೆ ಹರಾಜಿನಿಂದ ಬಂದ ಹಣವನ್ನು ಠೇವಣಿದಾರರಿಗೆ ವಿತರಿಸಲು ನ್ಯಾಯಾಲಯಕ್ಕೆ ಠೇವಣಿದಾರ ವಿವರಗಳನ್ನು ಸಲ್ಲಿಸಬೇಕಾಗಿದೆ.

ಈ ವಂಚಿತ ಸಂಸ್ಥೆಯ ಆಸ್ತಿಯನ್ನು ಕರ್ನಾಟಕ ಹಣಕಾಸು ಸಂಸ್ಥೆಗಳು ಠೇವಣಿದಾರರ ಹಿತಸಂರಕ್ಷಣಾ ಕಾಯ್ದೆಯಡಿಯಲ್ಲಿ ಮುಟ್ಟುಗೋಲು ಹಾಕಿ ಕೊಂಡಿದ್ದು, ಹರಾಜು ಪ್ರಕ್ರಿಯೆಗಾಗಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ನ್ಯಾಯಾಲಯದ ಆದೇಶದಂತೆ ಹರಾಜಿನಿಂದ ಬಂದ ಹಣವನ್ನು ಠೇವಣಿದಾರರಿಗೆ ವಿತರಿಸಲು ನ್ಯಾಯಾಲಯಕ್ಕೆ ಠೇವಣಿದಾರರ ವಿವರಗಳನ್ನು ಸಲ್ಲಿಸಬೇಕಾಗಿದೆ. ಆದ್ದರಿಂದ ಮೈತ್ರಿ ಪ್ಲಾಂಟೇಷನ್ ಮತ್ತು ಹಾರ್ಟಿಕಲ್ಚರ್ ಮತ್ತು ಅದರ ಅಂಗ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿರುವ ಠೇವಣಿದಾರರು, ಅವರ ಠೇವಣಿಗಳಿಗೆ ಸಂಬಂಧಿಸಿದಂತೆ ಈ ಸಂಸ್ಥೆ ನೀಡಿರುವ ಬಾಂಡ್/ಪಾಸ್‌ಪುಸ್ತಕ ಇತ್ಯಾದಿ ಮೂಲ ದಾಖಲೆಗಳೊಂದಿಗೆ ಅರ್ಜಿಗಳನ್ನು 30 ದಿನಗಳ ಒಳಗೆ ಸಲ್ಲಿಸಬಹುದು ನಂತರ ಬಂದ ಕೋರಿಕೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸಕ್ಷಮ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಕೋಲಾರದ ಸಹಾಯಕ ಕಮಿಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News