ಸಿಬಿಎಸ್‌ಇ ಫಲಿತಾಂಶ: ಲೂರ್ಡ್ಸ್ ಸಹಿತ ಹಲವು ಶಾಲೆಗಳು ಶೇ.100 ಸಾಧನೆ
ಮಂಗಳೂರು, ಮೇ 6: ಸಿಬಿಎಸ್‌ಇ ನಡೆಸಿದ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಮಂಗಳೂರಿನ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್‌ಗೆ ಶೇ.100 ಲಿತಾಂಶ ಬಂದಿದೆ.
ಪರೀಕ್ಷೆಗೆ ಹಾಜರಾದ ಎಲ್ಲ 140 ವಿದ್ಯಾರ್ಥಿಗಳು ಪಾಸಾಗಿದ್ದು, 82 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 52 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಬಿಜಿಎಸ್ ಎಜ್ಯುಕೇಶನ್ ಸೆಂಟರ್, ಕಾವೂರು: ಶ್ರೀ ಆದಿ ಚುಂಚನಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ಕಾವೂರಿನ ಬಿಜಿಎಸ್ ಎಜ್ಯುಕೇಶನ್ ಸೆಂಟರ್‌ಗೆ ಶೇ.100 ಲಿತಾಂಶ ಬಂದಿದೆ. ಪರೀಕ್ಷೆಗೆ ಹಾಜರಾದ 46 ವಿದ್ಯಾರ್ಥಿಗಳಲ್ಲಿ 33 ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 13 ಮಂದಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಮೌಂಟ್ ಕಾರ್ಮೆಲ್ ಸ್ಕೂಲ್: ಮೇರಿಹಿಲ್‌ನ ವೌಂಟ್ ಕಾರ್ಮೆಲ್ ಸೆಂಟ್ರಲ್ ಸ್ಕೂಲ್‌ನಿಂದ ಪರೀಕ್ಷೆಗೆ ಹಾಜರಾದ ಎಲ್ಲ 69 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 46 ಮಂದಿ ಡಿಸ್ಟಿಂಕ್ಷನ್‌ನಲ್ಲಿ ಹಾಗೂ 23 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ.
ಪ್ರೆಸ್ಟೀಜ್ ಇಂಟರ್‌ನ್ಯಾಶನಲ್ ಶಾಲೆ: ಪ್ಪಿನಮೊಗರು ಪ್ರೆಸ್ಟೀಜ್ ಇಂಟರ್‌ನ್ಯಾಶನಲ್ ಸ್ಕೂಲ್‌ನಿಂದ ಪರೀಕ್ಷೆಗೆ ಹಾಜರಾದ ಎಲ್ಲ 83 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, 27 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 45 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಶಾರದಾ ವಿದ್ಯಾನಿಕೇತನ ಪಬ್ಲಿಕ್ ಶಾಲೆ: ಮಂಗಳೂರು ತಲಪಾಡಿಯ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಶಾಲೆಗೆ 10ನೇ ತರಗತಿ ಪರೀಕ್ಷೆ ಯಲ್ಲಿ ಶೇ.100 ಫಲಿತಾಂಶ ಬಂದಿದೆ. ಸತತ 10ನೇ ವರ್ಷವೂ ಸಿಬಿಎಸ್‌ಸಿ ಪಠ್ಯಕ್ರಮದ 10ನೇ ತರಗತಿಯಲ್ಲಿ ಶೇ. 100 ಫಲಿತಾಂಶ ದಾಖಲಿಸಿದೆ.
ಹರ್ಷಿತ್ ಎಂ.ಎಲ್. ಶೇ.97 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ. ಒಟ್ಟು 211 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 50 ವಿದ್ಯಾರ್ಥಿಗಳು ಶೇ.90ಕ್ಕಿಂತ ಅಧಿಕ ಅಂಕ ಗಳಿಸಿದ್ದು, 70 ವಿದ್ಯಾರ್ಥಿಗಳು ಶೇ.80ರಿಂದ ಶೇ.90 ಅಂಕ, 55 ವಿದ್ಯಾರ್ಥಿಗಳು ಶೇ. 70ರಿಂದ ಶೇ.80 ಅಂಕ, 36 ವಿದ್ಯಾರ್ಥಿಗಳು ಶೇ.70ರಿಂದ 50 ಶೇ. ಅಂಕಗಳನ್ನು ಗಳಿಸಿದ್ದಾರೆ.