ವಿದ್ಯಾಪೋಷಕ್ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ
Update: 2019-05-06 17:12 GMT
ಉಡುಪಿ, ಮೇ 6: ಜಿಲ್ಲೆಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ. 80ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿದ್ಯಾರ್ಥಿ ವೇನಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಶಾಲಾ ಮುಖ್ಯೋಪಾಧ್ಯಾಯರಿಂದ ಅಥವಾ ಉಡುಪಿಯ ಯಕ್ಷಗಾನ ಕಲಾರಂಗದ ಕಚೇರಿಯಿಂದ ಅರ್ಜಿಯನ್ನು ಪಡೆದು ಭರ್ತಿಗೊಳಿಸಿ ಮೇ 15ರೊಳಗೆ ವಿದ್ಯಾಪೋಷಕ್, ಯಕ್ಷಗಾನ ಕಲಾರಂಗ, ಉಡುಪಿ -576101ಈ ವಿಳಾಸಕ್ಕೆ ಕಳುಹಿಸಬೇಕಾಗಿ ಸಂಸ್ಥೆಯ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2525444(ಕಚೇರಿ) ಅಥವಾ 9449088708 (ಮುರಲಿ ಕಡೆಕಾರ್)ನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.