ಮೇ 11 : ಬಿಐಟಿಯಲ್ಲಿ ಬ್ಯಾರೀಸ್ ಪ್ರತಿಭಾನ್ವೇಷಣೆ, ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ
ಮಂಗಳೂರು: ಬ್ಯಾರೀಸ್ ಅಕಾಡೆಮಿ ಆಫ್ ಲರ್ನಿಂಗ್ ವತಿಯಿಂದ ಮೇ 11ರಂದು ಪ್ರತಿಭಾನ್ವೇಷಣೆ ಮತ್ತು ವಿದ್ಯಾರ್ಥಿವೇತನ ವಿತರಣೆ- 2019 ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಇನೋಳಿಯ ಬ್ಯಾರೀಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ)ಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಬಿಐಟಿ ಮತ್ತು ಬ್ಯಾರೀಸ್ ಎನ್‌ವಿರೋ ಆರ್ಕಿಟೆಕ್ಚರ್ ಡಿಸೈನ್ ಸ್ಕೂಲ್ (ಬಿಇಎಡಿಎಸ್)ನಲ್ಲಿ ಇಂಜಿನಿಯರಿಂಗ್/ ಆರ್ಕಿಟೆಕ್ಟರ್ ವಿಭಾಗದಲ್ಲಿ ದಾಖಲಾತಿ ಪಡೆಯಲಿರುವ ಎಲ್ಲಾ ಧರ್ಮಗಳ ಪ್ರತಿಭಾನ್ವಿತ ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ಶೇ. 100ರಷ್ಟು ವಿದ್ಯಾರ್ಥಿವೇತನ ದೊರಕುವಂತೆ ಮಾಡುವ ಉದ್ದೇಶದಿಂದ ಪ್ರತಿಭಾನ್ವೇಷಣೆ ಕಾರ್ಯಕ್ರಮವ ಆಯೋಜಿಸಲಾಗುತ್ತಿದೆ.
ದ್ವಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅಂದು ಶನಿವಾರ ಬೆಳಗ್ಗೆ 9.30ಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ. ಭೌತಶಾಸ್ತ್ರ, ರಸಾಯನಸಾಸ್ತ್ರ, ಗಣಿತಶಾಸ್ತ್ರ ಮತ್ತು ಸಾಮಾನ್ಯ ಜ್ಞಾನದ ಕುರಿತಂತೆ 75 ನಿಮಿಷಗಳ ಪ್ರಶ್ನೆಗಳನ್ನು ಒಳಗೊಂಡ ಪ್ರತಿಭಾ ಅನ್ವೇಷಣೆ ಪರೀಕ್ಷೆ ನಡೆಯಲಿದೆ. ಅತ್ಯುತ್ತಮವಾಗಿ ನಿರ್ವಹಣೆ ತೋರಿದವರು ಇಂಜಿನಿಯರಿಂಗ್ ಹಾಗೂ ಆರ್ಕಿಟೆಕ್ಟರ್ ವಿಭಾಗದಲ್ಲಿ ಶೇ. 100ರಷ್ಟು ವಿದ್ಯಾರ್ಥಿ ವೇತನ ಜೊತೆ ದಾಖಲಾತಿ ಪಡೆಯಲು ಅರ್ಹತೆ ಪಡೆಯಲಿದ್ದಾರೆ.
ಈ ಕಾರ್ಯಕ್ರಮದ ಬಳಿಕ, ಮಂಗಳೂರಿನ ಕೆಎಂಡಿಸಿ (ಕರ್ನಾಟಕ ಅಲ್ಪ ಸಂಖ್ಯಾತ ಅಭಿವೃದ್ಧಿ ನಿಗಮ) ಸಹಭಾಗಿತ್ವದಲ್ಲಿ ಅರಿವು ಲೋನ್ ಶಿಬಿರವು ಅದೇ ಸ್ಥಳದಲ್ಲಿ ನಡೆಯಲಿದೆ. ಶಿಬಿರದಲ್ಲಿ ಪ್ರತಿ ಕೋರ್ಸ್‌ಗೆ ಸಾಲ ಪಡೆಯಲು ಅಗತ್ಯವಾದ ಅರ್ಜಿ ಪ್ರಕ್ರಿಯೆ, ಅಗತ್ಯ ದಾಖಲೆಗಳು ಹಾಗೂ ಶುಲ್ಕದ ಬಗ್ಗೆ ಮಾಹಿತಿಯನ್ನು ಒದಗಿಸಲಾಗುವುದು.
ಪೋಷಕರು ಹಾಗೂ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಹಾಗೂ ಅರಿವು ಲೋನ್ ಯೋಜನೆಯ ಪ್ರಯೋಜನ ಪಡೆಯುವಂತೆ ಕೋರಲಾಗುತ್ತಿದೆ.
ಪ್ರತಿಭಾನ್ವೇಷಣೆ ಕಾರ್ಯಕ್ರಮಕ್ಕೆ ವೆಬ್‌ಸೈಟ್ http:/bitmangalore.edu.in/th19 ನಲ್ಲಿ ಅಥವಾ 9900066888 or 7624874225 ಈ ಮೊಬೈಲ್ ಸಂಖ್ಯೆಗಳಿಗೆ ಹೆಸರು, ಕಾಲೇಜು ಹೆಸರು ಮತ್ತು ಸ್ಥಳದೊಂದಿಗೆ ಎಸ್‌ಎಂಎಸ್ ಕಳುಹಿಸುವ ಮೂಲಕ ನೋಂದಣಿ ಮಾಡಿಕೊಳ್ಳಬಹುದು.