ಮಂಗಳೂರು ವಿವಿ ಸಂಧ್ಯಾ ಕಾಲೇಜು: ಪ್ರವೇಶಾತಿ ಆರಂಭ

Update: 2019-05-07 17:10 GMT

ಮಂಗಳೂರು, ಮೇ 7: ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ 2019-20ನೇ ಶೈಕ್ಷಣಿಕ ವರ್ಷದ ಪ್ರಥಮ ವರ್ಷದ ಪದವಿ ತರಗತಿಗಳಿಗೆ ಪ್ರವೇಶಾತಿ ಆರಂಭವಾಗಿದೆ.

ನಗರದ ಹೃದಯ ಭಾಗದಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜಿನ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಾಗಿದ್ದು, ವಿಶ್ವವಿದ್ಯಾನಿಲಯದ ನೇರ ಆಡಳಿತಕ್ಕೆ ಒಳಪಟ್ಟಿದೆ.

ಅನಿವಾರ್ಯ ಕಾರಣಗಳಿಂದ ವಿದ್ಯಾಭ್ಯಾಸವನ್ನು ಪದವಿಪೂರ್ವ ಹಂತದಲ್ಲೇ ಮೊಟಕುಗೊಳಿಸಿದ ಹಾಗೂ ಇತರ ಕಾರಣಗಳಿಂದ ಹಗಲು ತರಗತಿಗಳಿಗೆ ಪ್ರವೇಶ ಪಡೆದುಕೊಳ್ಳಲು ಸಾಧ್ಯವಾಗದ ವಿದ್ಯಾಕಾಂಕ್ಷಿಗಳಿಗೆ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಉತ್ತಮ ಆಯ್ಕೆಯಾಗಿದೆ.
ಪ್ರಸ್ತುತ ಕಾಲೇಜಿನಲ್ಲಿ ಪದವಿ ವಿಭಾಗದಲ್ಲಿ ಬಿ.ಎ., ಬಿ.ಕಾಂ ಹಾಗೂ ಬಿ.ಸಿ.ಎ ಪದವಿ ತರಗತಿಗಳು ಲಭ್ಯವಿದ್ದು, ಬಿ.ಎ. ವಿಭಾಗದಲ್ಲಿ ಇತಿಹಾಸ, ಅರ್ಥಶಾಸ್ತ್ರ ಹಾಗೂ ಪತ್ರಿಕೋದ್ಯಮ ವಿಷಯಗಳಿವೆ. ಬಿ.ಎ. ಪದವಿಯಲ್ಲಿರುವ ಅರ್ಥಶಾಸ್ತ್ರ ಮತ್ತು ಇತಿಹಾಸ ವಿಷಯಗಳು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿ, ಕೆಪಿಎಸ್ಸಿ, ಬ್ಯಾಂಕಿಂಗ್ ಪರೀಕ್ಷೆಗಳನ್ನು ಎದುರಿಸಲು ಸಹಕಾರಿಯಾಗಿದೆ.

ಪದವಿ ಪೂರ್ವ ಹಂತದ ಬಳಿಕ ಸಿ.ಎ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಂಜೆ ಹೊತ್ತಿನಲ್ಲಿ ಬಿಕಾಂ ಪದವಿಯನ್ನು ಕೂಡ ಪೂರ್ಣಗೊಳಿಸಿಕೊಳ್ಳಬಹುದಾಗಿದೆ. ಸ್ನಾತಕೋತ್ತರ ವಿಭಾಗದಲ್ಲಿ ಎಂಬಿಎ (ಐಬಿ), ಎಂ.ಕಾಂ, ಎಂ.ಎ ಕೊಂಕಣಿ, ಎಂ.ಎ ತುಳು ಹಾಗೂ ಎಂ.ಎ ಇಂಗ್ಲೀಷ್ ಕೋರ್ಸ್‌ಗಳು ಲಭ್ಯವಿವೆ. ಜರ್ಮನ್ ಹಾಗೂ ಫ್ರೆಂಚ್ ಭಾಷೆಗಳಲ್ಲಿ ಡಿಪ್ಲೋಮಾ ಪದವಿಗಳು ಕೂಡ ಲಭ್ಯವಿವೆ.

ಕಾಲೇಜಿನಲ್ಲಿ ಸುಸಜ್ಜಿತ ಕೊಠಡಿಗಳು, ನುರಿತ ಮತ್ತು ಅನುಭವಿ ಉಪನ್ಯಾಸಕ ವರ್ಗ, ಕಂಪ್ಯೂಟರ್ ಮತ್ತು ಮಾಧ್ಯಮ ಪ್ರಯೋಗಾಲಯಗಳು ಲಭ್ಯವಿದ್ದು, ಅತೀ ಕಡಿಮೆ ಶುಲ್ಕದಲ್ಲಿ ವಿದ್ಯಾರ್ಥಿಗಳು ಪದವಿ ಶಿಕ್ಷಣವನ್ನು ಪಡೆಯಬಹುದಾಗಿದೆ. ಆಸಕ್ತ ವಿದ್ಯಾರ್ಥಿಗಳು ಅವಶ್ಯಕ ದಾಖಲೆ ಗಳೊಂದಿಗೆ ಪೂರ್ವಾಹ್ನ ಕಾಲೇಜು 10 ಗಂಟೆಯಿಂದ ಕಾಲೇಜು ಕಚೇರಿಯಿಂದ ಅರ್ಜಿಗಳನ್ನು ಪಡೆದುಕೊಂಡು ತಾವು ಇಚ್ಚಿಸಿದ ಪದವಿಗೆ ಅರ್ಜಿ ಸಲ್ಲಿಸಿ ದಾಖಲಾತಿ ಪಡೆದುಕೊಳ್ಳಬಹುದಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ರಾಮಕೃಷ್ಣ ಬಿ.ಎಂ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News