ಅಸೈಗೋಳಿ: ಮೇ.11ರಿಂದ 13ರವರೆಗೆ ಅಯ್ಯಪ್ಪ ಮಂದಿರದ ಬ್ರಹ್ಮಕಲಶೋತ್ಸವ
ಕೊಣಾಜೆ: ಕೊಣಾಜೆ ಗ್ರಾಮದ ಅಸೈಗೋಳಿಯ ಶ್ರೀ ಅಯಪ್ಪ ಸ್ವಾಮಿ ಮಂದಿರ ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ಮೇ. 11 ರಿಂದ 13 ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಜೀರ್ಣೋದ್ದಾರ ಸಮಿತಿ ಗೌರವಾಧ್ಯಕ್ಷ ಪ್ರಶಾಂತ್ ಕಾಜವ ಹೇಳಿದರು.
ಅವರು ಗುರುವಾರ ಅಸೈಗೋಳಿ ಅಯ್ಯಪ್ಪ ಮಂದಿರದ ಬಳಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಮೇ.11 ರಂದು ವೈಭವದ ಹಸಿರುವಾಣಿ ಹೊರೆ ಕಾಣಿಕೆಯ ಶೋಭಾಯಾತ್ರೆಯು ದೇರಳಕಟ್ಟೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಿಂದ ಜಾನಪದ ದಿಬ್ಬಣ, ಚೆಂಡೆ, ಗೊಂಬೆಗಳು, ಟ್ಯಾಬ್ಲೋ, ಕಲಶ, ನಾಸಿಕ್ ಬ್ಯಾಂಡ್ ಮುಂತಾದವುಗಳೊಂದಿಗೆ ನಡೆಯಲಿದ್ದು, ಸಂಜೆ 7 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ.
ಮೇ. 12ರಂದು ನಾಗದೇವರ ಪ್ರತಿಷ್ಠೆ, ದುರ್ಗಾ ನಮಸ್ಕಾರ ಪೂಜೆ ಮುಂತಾದ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯುವ ಧಾರ್ಮಿಕ ಸಭೆ ನಡೆಯಲಿದೆ. ಮೇ.13ರಂದು ಶ್ರೀ ಅಯ್ಯಪ್ಪ ದೇವರ ನೂತನ ಬಿಂಬ ಪ್ರತಿಷ್ಠೆ, 108 ಕಲಶಾಭಿಷೇಕ ಸಹಸ್ರನಾಮ ಹೋಮ, ಮಹಾಪೂಜೆ ನಡೆಯಲಿದೆ. ಸಂಜೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ವಿವೇಕ್ ಶೆಟ್ಟಿ ಬೊಳ್ಯಗುತ್ತು ಉದ್ಘಾಟಿಸುವರು. ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡುವರು. ಮುಖ್ಯ ಅತಿಥಿಗಳಾಗಿ ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಪದ್ಮನಾಭ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಧಾರ್ಮಿಕ ಮುಖಂಡರಾದ ಕುಂಬ್ಳೆ ಸುಂದರ್ ರಾವ್, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ, ಮಾಜಿ ಶಾಸಕರಾದ ವಸಂತ ಬಂಗೇರ, ಅಜಿತ್ ಕುಮಾರ್ ರೈ ಮಾಲಾಡಿ, ಉದಯ ಪೂಜಾರಿ ಮುಂತಾದವರು ಉಪಸ್ಥಿತರಿರುವರು. ಇದೇ ಸಂದರ್ಭದಲ್ಲಿ ಸಹಕರಿಸಿದವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಸತೀಶ್ ಶೆಟ್ಟಿ ಪಟ್ಲ ಮತ್ತು ತಂಡದವರಿಂದ ಯಕ್ಷಗಾನ ನಾಟ್ಯ ವೈಭವ ನಡೆಯಲಿರುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜೀರ್ಣೋದ್ಧಾರ ಸಮಿತಿ ಸಂಚಾಲಕ ಶ್ರೀನಿವಾಸ ಶೆಟ್ಟಿ ಪುಲ್ಲು, ಗೌರವಾಧ್ಯಕ್ಷ ಸುರೇಶ್ ಚೌಟ ಕಕ್ಕೆಮಜಲು, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ವಿಶ್ವನಾಥ ನಾಯ್ಕ್, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಪಟ್ಟೋರಿ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಆನಂದ ಅಸೈಗೋಳಿ, ಆರ್ಥಿಕ ಸಮಿತಿ ಸಂಚಾಲಕ ಮಂಜುನಾಥ ಆಳ್ವ, ಪ್ರಚಾರ ಸಮಿತಿ ಸಂಚಾಲಕ ತ್ಯಾಗಂ ಹರೇಕಳ ಮೊದಲಾದವರು ಉಪಸ್ಥಿತರಿದ್ದರು.