ಮಂಗಳೂರು: ಶಂಕರಾಚಾರ್ಯ ಜಯಂತಿ ಆಚರಣೆ
Update: 2019-05-09 12:49 GMT
ಮಂಗಳೂರು, ಮೇ 9: ದ.ಕ. ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದಲ್ಲಿ ಶಂಕರಾಚಾರ್ಯ ಜಯಂತಿಯನ್ನು ನಗರದ ಉರ್ವಸ್ಟೋರ್‌ನ ತುಳುಭವನದಲ್ಲಿ ಗುರುವಾರ ಆಚರಿಸಲಾಯಿತು.
ಜಿಪಂ ಸಿಇಒ ಡಾ.ಸೆಲ್ವಮಣಿ ಆರ್. ಅವರು ಶಂಕರಾಚಾರ್ಯರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್‌ಕುಮಾರ್ ಕಲ್ಕೂರ, ಮಂಗಳೂರು ಹವ್ಯಕ ಸಭಾದ ಅಧ್ಯಕ್ಷ ಬಾಲಸುಬ್ರಹ್ಮಣ್ಯ ಕೆ., ಭಾರತಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಶ್ಯಾಮಸುಂದರ ಬಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕ ರಾಜೇಶ್ ಜಿ. ಮತ್ತಿತರರು ಉಪಸ್ಥಿತರಿದ್ದರು.