ವಿಕೋಪ ನಿರ್ವಹಣೆ ಕಾರ್ಯಾಗಾರ
Update: 2019-05-09 12:49 GMT
ಮಂಗಳೂರು, ಮೇ 9: ದ.ಕ. ಜಿಲ್ಲಾಡಳಿತ, ಆಡಳಿತ ತರಬೇತಿ ಸಂಸ್ಥೆ ಮೈಸೂರು ಹಾಗೂ ಜಿಲ್ಲಾ ತರಬೇತಿ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಂಕಿರಣದಲ್ಲಿ ಗುರುವಾರ ಜಿಲ್ಲಾ ವಿಕೋಪ ನಿರ್ವಹಣೆ ಯೋಜನೆಯ ಪರಿಷ್ಕರಣೆ ಹಾಗೂ ತಯಾರಿಕೆ ಬಗ್ಗೆ ಕಾರ್ಯಾಗಾರ ನಡೆಯಿತು.
ಕಾರ್ಯಾಗಾರವನ್ನು ಜಿಲ್ಲಾ ಅಪರ ಜಿಲ್ಲಾಧಿಕಾರಿ ವೆಂಕಟಾಚಲಪತಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಆಡಳಿತ ತರಬೇತಿ ಸಂಸ್ಥೆ ಮೈಸೂರಿನ ವಿಕೋಪ ನಿರ್ವಹಣೆ ವಿಭಾಗದ ಡಾ.ಚಂದ್ರ ನಾಯಕ್ ಉಪಸ್ಥಿತರಿದ್ದರು.